ಗುಜರಾತ್ನಲ್ಲಿ ಸತತ 7ನೇ ಬಾರಿಗೆ ಅಧಿಕಾರ ಹಿಡಿಯುವ ಬಿಜೆಪಿ ಭುಪೇಂದ್ರ ಪಟೇಲ್ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಲಿದ್ದಾರೆ . ಪಕ್ಷದ ನಿರ್ಧಾರದಂತೆ ಸೋಮವಾರ ( ಡಿಸೆಂಬರ್ 12 ರಂದು) ಭುಪೇಂದ್ರ ಪಟೇಲ್ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ವಚನ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ. ಅಹ್ಮದಾಬಾದ್ನಲ್ಲಿರುವ ಸ್ಟೇಡಿಯಂನಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.
ಗುಜರಾತ್ ವಿಧಾನಸಭೆಯ ಚುನಾವಣೆಯ ಫಲಿತಾಂಶದಲ್ಲಿ ಮ್ಯಾಜಿಕ್ ನಂಬರ್ ತಲುಪಿದೆ. 158 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಕಾಂಗ್ರೆಸ್ 16 ಕ್ಷೇತ್ರಗಳಲ್ಲಿ ಆಮ್ ಆದ್ಮಿ 5 ಕ್ಷೇತ್ರಗಳಲ್ಲಿ ಹಾಗೂ ಇತರೆ ಅಭ್ಯರ್ಥಿಗಳು ಮೂರು ಕ್ಷೇತ್ರಗಳಲ್ಲಿ ಮುನ್ನಡೆಯನ್ನ ಸಾಧಿಸಿದ್ದಾರೆ.
More Stories
ಬಜೆಟ್ 2023: ಮಧ್ಯಮ ವರ್ಗಕ್ಕೆ ಬಿಗ್ ರಿಲೀಫ್, 5ರಿಂದ 7 ಲಕ್ಷದವರೆಗೆ ತೆರಿಗೆ ಇಲ್ಲ
ಒಡಿಶಾ ಆರೋಗ್ಯ ಸಚಿವರಿಗೆ ಗುಂಡೇಟು : ಚಿಕಿತ್ಸೆ ಫಲಿಸದೆ ಸಾವು
ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ- ಯುವಕರಿಗೆ ಪ್ರಧಾನಿ ಕರೆ