ಗುಜರಾತ್ನ ನೂತನ 15 ನೇ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅವರನ್ನು ಆಯ್ಕೆ ಮಾಡಿ ಬಿಜೆಪಿ ಹೈಕಮಾಂಡ್ ಕರ್ನಾಟಕ ಮಾದರಿಯಲ್ಲೇ ಅಚ್ಚರಿ ಮೂಡಿಸಿದೆ.
ಭೂಪೇಂದ್ರ ಪಾಟೀಲ್ ನಾಳೆ ನೂತನ ಸಿಎಂ ಆಗಿ ಅಧಿಕಾರದ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮುಖ್ಯಮಂತ್ರಿ ವಿಜಯ್ ರುಪಾನಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಶಾಸಕಾಂಗ ಸಭೆ ಕರೆದ ಬಿಜೆಪಿ ನಾಯಕರು ಭೂಪೇಂದ್ರ ಪಟೇಲ್ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದಾರೆ.
ಶುಕ್ರವಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ವಿಜಯ್ ರೂಪಾನಿಯವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ನಿರ್ಧಾರ ಮಾಡಲಾಗಿತ್ತು.
ಈ ಸಭೆಯಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಸಹ ಭಾಗಿಯಾಗಿದ್ದರು. ಹೈಕಮಾಂಡ್ ಆದೇಶದಂತೆ ವಿಜಯ್ ರುಪಾನಿ ನಿನ್ನೆ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ನೀಡಿದ್ದರು.
ಕೇಂದ್ರ ನಾಯಕರು ಇಂದು ಗಾಂಧಿನಗರಕ್ಕೆ ಆಗಮಿಸಿ ಶಾಸಕಾಂಗ ಸಭೆ ನಡೆಸಿ ಭೂಪೇಂದ್ರ ಪಟೇಲ್ರನ್ನು ಮುಂದಿನ ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಭೂಪೇಂದ್ರ ಪಟೇಲ್ ನಾಳೆಯೇ ಪ್ರಮಾಣವಚನ ಸ್ವೀಕರಿಸಲಿದ್ದಾರೆ .
ಗುಜರಾತಿನ ಘಟ್ಲೋಡಿಯಾ ಕ್ಷೇತ್ರದಿಂದ 1.17 ಲಕ್ಷ ಮತಗಳಿಂದ ಶಾಸಕರಾಗಿ ಆಯ್ಕೆಯಾಗಿರುವ ಭೂಪೇಂದ್ರ ಪಾಟೀಲ್ ಪ್ರಧಾನಿ ಮೋದಿಗೆ ಆಪ್ತರೂ ಹೌದು.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ