ಡಿಕೆ ಶಿವಕುಮಾರ್ ಕಾಂಗ್ರೆಸ್‌ನಿಂದ ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರವನ್ನು ಸಲ್ಲಿಸಿದ್ದರು. ಆದರೆ ಆದಾಯ ತೆರಿಗೆ ನೋಟಿಸ್ ಹಿನ್ನೆಲೆ ಅವರ ನಾಮಪತ್ರ ತಿರಸ್ಕೃತವಾಗುತ್ತದೆ ಎಂಬ ಭೀತಿಯಿತ್ತು. ಹೀಗಾಗಿ ಅವರ ಸಹೋದರ ಡಿಕೆ ಸುರೇಶ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದರು.
ಈಗ ಡಿಕೆಶಿ ನಾಮಪತ್ರ ಸ್ವೀಕೃತವಾಗಿದೆ ದೊಡ್ಡ ತಲೆನೋವು ಕಳೆದಂತಾಗಿದೆ.
ಕೆಪಿಸಿಸಿ ಅಧ್ಯಕ್ಷರ ನಾಮಪತ್ರವನ್ನು ಚುನಾವಣಾಧಿಕಾರಿ ಸಂತೋಷ್ ಶುಕ್ರವಾರ ಪರಿಶೀಲನೆ ನಡೆಸಿದ್ದಾರೆ. ಅಫಿಡವಿಟ್ ಸೇರಿ ಇನ್ನಿತರ ದಾಖಲಾತಿಗಳನ್ನು ಪರಿಶೀಲಿಸಲಾಗಿದೆ. ಡಿಕೆಶಿ 4 ಸೆಟ್ ನಾಮಪತ್ರಗಳನ್ನು ಸಲ್ಲಿಸಿದ್ದು, ಎಲ್ಲಾ ನಾಮಪತ್ರಗಳನ್ನೂ ಸ್ವೀಕೃತಗೊಳಿಸಲಾಗಿದೆ.
ಡಿಕೆಶಿಯ ನಾಮಪತ್ರ ಸ್ವೀಕೃತಗೊಂಡ ಹಿನ್ನೆಲೆಯಲ್ಲಿ ಡಿಕೆ ಸುರೇಶ್ ನಾಮಪತ್ರ ಹಿಂದಕ್ಕೆ ಪಡೆಯಲಿದ್ದಾರೆ ಯಾವಾಗ ಹಿಂದಕ್ಕೆ ಪಡೆಯುತ್ತಾರೆ ಎಂಬುದು ತಿಳಿದು ಬಂದಿಲ್ಲ.ಇದನ್ನು ಓದಿ –ಈಶ್ವರಪ್ಪಗೆ ಪ್ರಧಾನಿ ಮೋದಿಯಿಂದ ಪ್ರಶಂಸೆ
More Stories
ಮನ್ಮುಲ್ ಫಲಿತಾಂಶ: ಕಾಂಗ್ರೆಸ್ ಅಧಿಕಾರಕ್ಕೆ ; 3 ತಾಲೂಕುಗಳ ಫಲಿತಾಂಶಕ್ಕೆ ತಡೆ
ಮಂಡ್ಯ: ಬಾಲಕಿಗೆ ಕೇಕ್ ನೀಡಿದ ಕಾಮುಕರು ಚಾಕು ಬೆದರಿಕೆ ಹಾಕಿ ಗ್ಯಾಂಗ್ ರೇಪ್
ಕೆರೆಗೆ ಈಜಲು ತೆರಳಿದ ಇಬ್ಬರು ಬಾಲಕರು ನೀರುಪಾಲು