ಏಪ್ರಿಲ್ 11ರಂದು ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದರು. ಅಂದು ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಕೇಳಿಬಂದಿತ್ತು. ಸಂತೋಷ್ ಆತ್ಮಹತ್ಯೆಗೆ ಸಚಿವರ ಕುಮ್ಮಕ್ಕು, ಪ್ರಚೋದನೆ ಕಾರಣ ಎಂಬ ಆರೋಪ, ಪ್ರಕರಣದ ಹಿನ್ನೆಲೆಯಲ್ಲಿ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಸಾಕ್ಷ್ಯಾಧಾರಗಳಿಲ್ಲದ ಹಿನ್ನೆಲೆಯಲ್ಲಿ ಉಡುಪಿ ಪೊಲೀಸರು ನ್ಯಾಯಾಲಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಆದರೆ ನ್ಯಾಯಾಲಯ ಬಿ ರಿಪೋರ್ಟ್ ಅಂಗೀಕರಿಸಿಲ್ಲ ಎಂದು ತಿಳಿದುಬಂದಿದೆ.
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಬಿ ರಿಪೋರ್ಟ್ ಸಿದ್ಧಪಡಿಸಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದಾರೆ. ಕಿರುತೆರೆಯ ನಟ ಯಲಹಂಕ ಬಾಲಾಜಿ ಇನ್ನಿಲ್ಲ
ವರದಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡುವಂತಹ ಅಂಶಗಳಲ್ಲಿ ಮಾಜಿ ಸಚಿವ ಈಶ್ವರಪ್ಪ ಭಾಗಿಯಾದ ಬಗ್ಗೆ ಸೂಕ್ತ ಸಾಕ್ಷ್ಯಾಧಾರಗಳು ಲಭ್ಯವಿಲ್ಲ ಎಂದು ಕೆ.ಎಸ್.ಈಶ್ವರಪ್ಪನವರಿಗೆ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಿದ್ದಾರೆ ಎಂದು ತಿಳಿದುಬಂದಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು