ಹೈಕೋರ್ಟ್ ನಿಂದ ಡಾ.ಸೂರಜ್ ರೇವಣ್ಣಗೆ ಬಿಗ್ ರಿಲೀಫ್ : ಸ್ಪರ್ಧೆ ನಿರಾತಂಕ

Team Newsnap
1 Min Read

ಮಾಜಿ ಸಚಿವ ಹೆಚ್​.ಡಿ.ರೇವಣ್ಣ ಪುತ್ರ ಸೂರಜ್ ರೇವಣ್ಣಗೆ ಹೈಕೋರ್ಟ್​ ಬಿಗ್ ರಿಲೀಫ್ ನೀಡಿದೆ.

ಪರಿಷತ್ ಚುನಾವಣೆಗೆ ಸೂರಜ್ ರೇವಣ್ಣ ಸ್ಪರ್ಧೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ ಮಾಡಿ ನ್ಯಾ.ಎಂ.ನಾಗಪ್ರಸನ್ನ ಏಕಸದಸ್ಯ ಪೀಠ ಆದೇಶ ನೀಡಿದೆ.

ಕುಂದೂರು ಗ್ರಾಪಂ ಸದಸ್ಯ ಹರೀಶ್ ಕೆ. ಎಲ್. ಡಾ. ಸೂರಜ್ ರೇವಣ್ಣ ವಿರುದ್ಧ ರಿಟ್ ಅರ್ಜಿ ಸಲ್ಲಿಸಿದ್ದರು.

ಈಗಾಗಲೇ ಚುನಾವಣೆ ಘೋಷಣೆಯಾಗಿದೆ. ಈಗ ಮಧ್ಯಪ್ರವೇಶ ಮಾಡುವುದು ಸರಿಯಲ್ಲ ಎಂದು ಹೈಕೋರ್ಟ್​ ಅರ್ಜಿಯನ್ನು ವಜಾ ಮಾಡಿ ಆದೇಶ ನೀಡಿದೆ.

ಹಾಸನ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆ ಜೆಡಿಎಸ್ ಅಭ್ಯರ್ಥಿಯಾಗಿ ಸೂರಜ್ ಕಣಕ್ಕಿಳಿದಿದ್ದಾರೆ.

ಸೂರಜ್ ರೇವಣ್ಣ ಮದುವೆ ಆಗಿದ್ದರೂ ಪ್ರಮಾಣಪತ್ರದಲ್ಲಿ ಮಾಹಿತಿ ನೀಡಿಲ್ಲ. ನಾಮಪತ್ರದಲ್ಲಿ ಮದುವೆಯ ವಿಚಾರವನ್ನು ಮುಚ್ಚಿಟ್ಟಿದ್ದಾರೆ. ಕಾನೂನಿನ ಪ್ರಕಾರ ಮದುವೆ ವಿಚಾರ ಉಲ್ಲೇಖಿಸಬೇಕು. ಡಾ. ಸೂರಜ್ ರೇವಣ್ಣ ನಾಮಪತ್ರ ತಿರಸ್ಕಾರ ಮಾಡಬೇಕು, ವಿಧಾನ ಪರಿಷತ್ ಚುನಾವಣೆಗೆ ತಡೆ ನೀಡಬೇಕು ಎಂದು ಅರ್ಜಿ ಸಲ್ಲಿಕೆ ಆಗಿತ್ತು. ಇದರ ವಿಚಾರಣೆ ನಡೆಸಿದ್ದ ಕೋರ್ಟ್​​, ನಾಮಿನೇಷನ್ ತಿರಸ್ಕರಿಸಲು ನಿರಾಕರಿಸಿದೆ.

Share This Article
Leave a comment