ಡಿಸಿಎಂ ಡಿಕೆ ಶಿ​​ಗೆ ಸುಪ್ರಿಂ ನಿಂದ ಬಿಗ್ ರಿಲೀಫ್ : ​ಸಿಬಿಐಗೆ ಮತ್ತೆ ನಿರಾಸೆ

Team Newsnap
1 Min Read

ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್​ಗೆ ಸುಪ್ರೀಂಕೋರ್ಟ್​ನ್ ಬಿಗ್​ ರಿಲೀಫ್​ ನೀಡಿದೆ

ಡಿಕೆ ಶಿವಕುಮಾರ್​ ವಿರುದ್ಧದ ತನಿಖೆಗೆ ತಡೆಯಾಜ್ಞೆ ತೆರವು ಕೋರಿ‌ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಡಿಕೆ ಶಿವಕುಮಾರ್​ ವಿರುದ್ಧದ ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು.

ಈ ಆದೇಶ ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿತ್ತು. ಆದರೆ, ಸುಪ್ರೀಂಕೋರ್ಟ್ ಇಂದು ಸಿಬಿಐ ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದೆ. ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಸಾಧ್ಯವಿಲ್ಲ ಎಂದು ಹೇಳಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ.

2013ರಿಂದ 2018ರ ವರೆಗಿನ ಆದಾಯಗಳಿಕೆ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ ಇದಕ್ಕೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಸಿಬಿಐ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು.ಸಿದ್ದಗಂಗಾ ಮಠ – 5 ಕೋಟಿ ಮೌಲ್ಯದ ಥೀಮ್ ಪಾರ್ಕ್ ನಿರ್ಮಾಣ

ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಕಲಂ 13(2), 13(1)ಇ ಅಡಿಯಲ್ಲಿ ಸಿಬಿಐ 2020ರ ಅಕ್ಟೋಬರ್ 3ರಂದು ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು. ಅಲ್ಲದೇ 2013ರಿಂದ 2018ರ ವರೆಗಿನ ಆದಾಯಗಳಿಕೆ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದ್ದು ಇದನ್ನು ಪ್ರಶ್ನಿಸಿ ಡಿಕೆ ಶಿವಕುಮಾರ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ತನಿಖೆಗೆ ಮಧ್ಯಂತರ ತಡೆ ತಡೆಯಾಜ್ಞೆ ನೀಡಿತ್ತು. ಇದೇ ಅದೇ ತಡೆಯಾಜ್ಞೆ ವಿಸ್ತರಣೆಯಾಗುತ್ತಾ ಬಂದಿದ್ದು, ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.

Share This Article
Leave a comment