December 22, 2024

Newsnap Kannada

The World at your finger tips!

muraga durga

ಜೈಲಿನಲ್ಲಿರುವ ಮುರುಘಾ ಸ್ವಾಮೀಜಿಗೆ ಬಿಗ್ ಶಾಕ್: ಮುರುಘಾ ಮಠ ಸರ್ಕಾರ ಅಧೀನಕ್ಕೆ ?

Spread the love

ಚಿತ್ರದುರ್ಗ ಮುರುಘಾ ಮಠದ ಮುರುಘಾ ಶರಣರು ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ , ಮಠಕ್ಕೆ ಆಡಳಿತಾಧಿಕಾರಿ ನೇಮಕ ಸನ್ನಿಹಿತವಾಗಿದೆ.

ಸರ್ಕಾರದಿಂದ ಮಾಹಿತಿ ಕೇಳಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಸರ್ಕಾರಕ್ಕೆ 70 ಪುಟಗಳ ವರದಿಯನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸರ್ಕಾರಕ್ಕೆ ಸಲ್ಲಿಸಿದ್ದಾರೆ.5 ಲಕ್ಷ ರು ಲಂಚ ಪಡೆಯುವ ಮುನ್ನ ಮಹಿಳಾ ಕೆಎಎಸ್ ಅಧಿಕಾರಿ ವರ್ಷಾ ಲೋಕಾಯುಕ್ತ ಬಲೆಗೆ

ಮುರುಘಾ ಮಠದಲ್ಲಿ ನಡೆದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸರ್ಕಾರ ಮಧ್ಯಪ್ರವೇಶಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಮಾಜದ ಮುಖಂಡರು ಹಾಗೂ ಭಕ್ತರು ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ಶೀಘ್ರ ವರದಿ ನೀಡಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿತ್ತು.

ಜಿಲ್ಲಾಧಿಕಾರಿಗಳು ಕಂದಾಯ ಇಲಾಖೆ ಕಾರ್ಯದರ್ಶಿಗೆ ವರದಿ ಸಲ್ಲಿಸಿದ್ದಾರೆ. ವರದಿಯನ್ನು ಗೌಪ್ಯವಾಗಿ ಇಡಲಾಗಿದೆ. ಮಠಕ್ಕೆ ಆಡಳಿತಾಧಿಕಾರಿ ನೇಮಕ ಸನ್ನಿಹಿತವಾಗಿದೆ ಎಂದು ಹೇಳಲಾಗಿದೆ.

ಈ ನಡುವೆ ಮುರುಘಾ ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ, ಜಿಲ್ಲಾಧಿಕಾರಿಗಳು ಕೇಳಿದ ಮಾಹಿತಿ ನೀಡಿದ್ದೇವೆ. ಮುರುಘಾ ಶ್ರೀಗಳು ನಮಗೆ ಜಿಪಿಎ ನೀಡಿದ್ದಾರೆ. ಎಸ್.ಜೆ.ಎಂ. ವಿದ್ಯಾಪೀಠದ ಕಾರ್ಯದರ್ಶಿಯಾಗಿ ವಸ್ತ್ರದಮಠ ಅವರಿಗೂ ಜಿಪಿಎ ನೀಡಲಾಗಿದೆ, ಮಠ ಮತ್ತು ವಿದ್ಯಾಪೀಠದ ಆಡಳಿತ ಸುಗಮವಾಗಿ ನಡೆಯುತ್ತಿದೆ. ಸರ್ಕಾರದಿಂದ ಆಡಳಿತಾಧಿಕಾರಿ ನೇಮಕ ಅನಗತ್ಯವಾಗಿದೆ ಎಂದು ಹೇಳಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!