ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ರೂಪಿಸಿರುವ ಸಂಚು ಬಯಲಾಗಿದೆ.
20 ಕೆಜಿ RDX ನೊಂದಿಗೆ ಸ್ಲೀಪರ್ ಸೆಲ್ ಮೂಲಕ ಪ್ರಧಾನಿಯನ್ನು ಕೊಲ್ಲಲು ಸಂಚು ರೂಪಿಸಲಾಗಿದೆ ಎಂಬ ಎಚ್ಚರಿಕೆಯ ಇ-ಮೇಲ್ ಒಂದು ಬಂದಿದೆ.
ಎನ್ಐಎನಿಂದ ತನಿಖೆಗಾಗಿ ಬಂದಿರುವ ಇ-ಮೇಲ್ನಲ್ಲಿ ಭಯೋತ್ಪಾದಕರ ಜೊತೆ ಸಂಪರ್ಕವಿದೆ ಎಂದು ತಿಳಿಸಲಾಗಿದೆ. ಈಗಾಗಲೇ ಆರ್‌ಡಿಎಕ್ಸ್ ಸಂಗ್ರಹಿಸಲಾಗಿದ್ದು, ಒಟ್ಟು 20 ಕೆಜಿ ಆರ್‌ಡಿಎಕ್ಸ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಎಚ್ಚರಿಕೆಯನ್ನು ನೀಡಿದ್ದಾನೆ.
ಇ-ಮೇಲ್ ಅನ್ನು ಮುಂಬೈನ ರಾಷ್ಟ್ರೀಯ ತನಿಖಾ ತಂಡಕ್ಕೆ ಸೆಕ್ಯೂರಿಟಿ ಏಜೆನ್ಸಿ ನೀಡಿದೆ.
ಆದರೆ ಈ ಮೇಲ್ ಎಷ್ಟು ನಿಜ, ಅದನ್ನು ಎಲ್ಲಿಂದ ಕಳುಹಿಸಲಾಗಿದೆ? ಎಂಬ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಸದ್ಯ ಎನ್ಐಎ ಅಧಿಕಾರಿಗಳು ತನಿಖೆಯನ್ನು ಮುಂದುವರಿಸಿದ್ದಾರೆ.
ಇ-ಮೇಲ್ನಲ್ಲಿ ಇರುವುದು ಏನು? :
ನನ್ನ ಬಳಿ 20ಕ್ಕೂ ಹೆಚ್ಚು ಆರ್ಡಿಎಕ್ಸ್ಗಳು ಇವೆ. 20 ಕಡೆಗಳಲ್ಲಿ ದೊಡ್ಡ ಮಟ್ಟದಲ್ಲಿ ಅಟ್ಯಾಕ್ ಮಾಡಲು ಪ್ಲಾನ್ ರೂಪಿಸಿದ್ದೇನೆ. ಅದೂ ಕೂಡ ಪ್ರಮುಖ ನಗರಗಳಲ್ಲಿ.
ನಾನು ಪ್ರಧಾನಿ ಮೋದಿಯನ್ನು ಕೊಲ್ಲಲು ನಿಶ್ಚಯಿಸಿದ್ದೇನೆ. ನಾನು ಅದನ್ನ ಮಾಡುತ್ತೇನೆ. ಮೋದಿ ನನ್ನ ಜೀವನವನ್ನು ಹಾಳು ಮಾಡಿದ್ದಾರೆ. ನಾನು ಯಾರನ್ನೂ ಬಿಡುವುದಿಲ್ಲ. ನಾನು ಸರಿಸುಮಾರು 2 ಲಕ್ಷ ಮಂದಿಯನ್ನ ಕೊಲ್ಲುತ್ತೇನೆ. ನನ್ನ ಬಾಂಬ್ನಿಂದ ಜನರು ಸತ್ತರೆ ಅವರೂ ಕೂಡ ಸಾಯುತ್ತಾರೆ.
ನಾನು ಈಗಾಗಲೇ ಕೆಲವು ಉಗ್ರರನ್ನ ಭೇಟಿ ಮಾಡಿದ್ದೇನೆ. ಅವರು ನನಗೆ ಆರ್‌ಡಿಎಕ್ಸ್ ಪಡೆಯಲು ಸಹಾಯ ಮಾಡಿದ್ದಾರೆ. ನನಗೆ ಸುಲಭವಾಗಿ ಬಾಂಬ್ ಸಿಕ್ಕಿದ್ದೂ ಈ ವಿಚಾರದಲ್ಲಿ ನನಗೆ ಖುಷಿ ಇದೆ. ನಾನು ಎಲ್ಲಾ ಕಡೆಯೂ ಬ್ಲಾಸ್ಟ್ ಮಾಡಿಯೇ ಮಾಡುತ್ತೇನೆ. ನೀವು ನನ್ನನ್ನ ತಡೆಯಬಹುದು, ಆದರೆ ಪ್ಲಾನ್ ಈಗಾಗಲೇ ರೆಡಿಯಾಗಿದೆ ಎಂದು ಇ ಮೇಲ್ ನಲ್ಲಿ ಆಂಗ್ಲ ಭಾಷೆಯಲ್ಲಿ ಹೇಳಲಾಗಿದೆ.
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ