ಚುನಾವಣೆಗೂ ಮುನ್ನ ಬಿಗ್ ಟ್ವಿಸ್ಟ್ : ಟಿಎಂಸಿ ಸೇರಿದ ಯಶವಂತ್ ಸಿನ್ಹಾ

Team Newsnap
1 Min Read

ಮುಂದೆ ಯಾವುದೇ ರಾಜಕೀಯ ಪಕ್ಷ ಸೇರುವುದಿಲ್ಲ ಎಂದು ಶಪಥ ಮಾಡಿ
ಬಿಜೆಪಿಯನ್ನು ತೊರೆದಿದ್ದ ಕೇಂದ್ರ ಮಾಜಿ ಸಚಿವ ಯಶ್ವಂತ್ ಸಿನ್ಹಾ (83) ಈಗ ತೃಣ ಮೂಲ ಕಾಂಗ್ರೆಸ್‍ಗೆ ಸೇರ್ಪಡೆ ಯಾಗಿದ್ದಾರೆ.

ಯಶವಂತ್ ಸಿನ್ಹಾ(83)ರವರು, ಡೆರೆಕ್ ಓ ಬ್ರಾಯನ್, ಸುದೀಪ್ ಬಂದೋಪಾಧ್ಯಾಯ ಹಾಗೂ ಸುಬ್ರತ್ ಮುಖರ್ಜಿ ಸಮ್ಮುಖದಲ್ಲಿ ಟಿಎಂಸಿಗೆ ಸೇರ್ಪಡಗೊಂಡಿದ್ದಾರೆ.

ಚುನಾವಣಾ ಹೊಸ್ತಿಲಲ್ಲಿ ಪಶ್ಚಿಮ ಬಂಗಾಳ ರಾಜಕೀಯ ಕಣ ಮತ್ತೊಂದು ತಿರುವು ಪಡೆದುಕೊಂಡಿದೆ.

1990ರಲ್ಲಿ ಹಣಕಾಸು ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. 2004ರಲ್ಲಿ ಭಾರತ ವಿದೇಶಾಂಗ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇದೀಗ ಟಿಎಂಸಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ.

ಯಾವುದೇ ಪಕ್ಷ ಸೇರುವುದಿಲ್ಲ ಎಂದಿದ್ದರು :

ಈ ಹಿಂದೆ ಪ್ರಜಾಪ್ರಭುತ್ವದ ರಕ್ಷಣೆಗಾಗಿ ಕೆಲಸ ಮಾಡುತ್ತೇನೆ. ಬರುವ ದಿನಗಳಲ್ಲಿ ಬಿಜೆಪಿಯೇತರ ಪಕ್ಷಗಳನ್ನು ಒಗ್ಗೂಡಿಸುವ ಕೆಲಸ ಮಾಡುತ್ತೇನೆ. ಯಾವುದೇ ರಾಜಕೀಯ ಪಕ್ಷವನ್ನು ಸೇರುವುದಿಲ್ಲ, ಪಕ್ಷಾಧಾರಿತ ರಾಜಕೀಯ ಮಾಡುವುದಿಲ್ಲ, ಯಾವುದೇ ಉನ್ನತ ಹುದ್ದೆಯ ಆಕಾಂಕ್ಷಿಯಲ್ಲ ಎಂದು ತಿಳಿಸಿದ್ದರು.

ಆದರೂ ಈಗ ಯಶವಂತ್ ಸಿನ್ಹಾ ನಮ್ಮ ಪಕ್ಷಕ್ಕೆ ಸೇರಿರುವುದು ಸಂತಸವಾಗಿದೆ. ನಂದಿಗ್ರಾಮದಲ್ಲಿ ನಡೆದ ಹಲ್ಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ಗಾಯಗೊಂಡಿದ್ದಾರೆ. ಹೀಗಾಗಿ ಇಂದು ಈ ಸಂತಸದಲ್ಲಿ ಅವರು ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಸುಬ್ರತ್ ಮುಖರ್ಜಿ ಹೇಳಿದರು,

1990ರಲ್ಲಿ ಹಣಕಾಸು ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. 2004ರಲ್ಲಿ ಭಾರತ ವಿದೇಶಾಂಗ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇದೀಗ ಟಿಎಂಸಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ.

Share This Article
Leave a comment