ಬಿಗ್ ಬಾಸ್ ಸ್ಪರ್ಧಿ ದಿವ್ಯಾ ಸುರೇಶ್‌ ರಸ್ತೆ ಅಪಘಾತದಲ್ಲಿ ಗಾಯ

Team Newsnap
1 Min Read

ಬಿಗ್‌ ಬಾಸ್‌ ಖ್ಯಾತಿಯ ದಿವ್ಯಾ ಸುರೇಶ್‌ ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸೋಮವಾರ ದ್ವಿಚಕ್ರ ವಾಹನದಲ್ಲಿ ಲಸಿಕೆ ಪಡೆದು ಮನೆಗೆ ಮರಳುತ್ತಿದ್ದಾಗ ನಾಯಿ ಅಡ್ಡ ಬಂದಿದೆ. ಈ ವೇಳೆ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನದಿಂದ ನೆಲಕ್ಕೆ ಬಿದ್ದಿದ್ದಾರೆ.

ಬಿದ್ದ ರಭಸಕ್ಕೆ ಕೆನ್ನೆ ಮತ್ತು ದವಡೆ ಭಾಗಕ್ಕೆ ಪೆಟ್ಟು ಬಿದ್ದಿದೆ. ದಿವ್ಯಾ ಸುರೇಶ್‌ ಚಿಕಿತ್ಸೆ ಪಡೆಯುತ್ತಿದ್ದಾರೆ.

. ಇನ್​ಸ್ಟಾಗ್ರಾಮ್​ ಸ್ಟೇಟಸ್​ ಮೂಲಕ ದಿವ್ಯಾ ಈ ಮಾಹಿತಿ ಹಂಚಿಕೊಂಡಿದ್ದಾರೆ.

ಡಿಸೆಂಬರ್‌ 28 ರಂದು ನೈಟ್ ಕರ್ಫ್ಯೂ ವೇಳೆ ಎಂಜಿ ರಸ್ತೆಯಲ್ಲಿ ಅವರು ಓಡಾಡುತ್ತಿದ್ದರು. ಈ ವೇಳೆ ಪೊಲೀಸರು ದಿವ್ಯಾ ಮತ್ತು ಸ್ನೇಹಿತರನ್ನು ಮನೆಗೆ ಕಳುಹಿಸಿಲು ಮುಂದಾದಾಗ ವಾಹಿನಿಗಳ ಕ್ಯಾಮೆರಾ ನೋಡಿ ಹೈಡ್ರಾಮಾ ಮಾಡಿದ್ದರು.

Share This Article
Leave a comment