January 1, 2025

Newsnap Kannada

The World at your finger tips!

k r pete

ವ್ಯವಹಾರದಲ್ಲಿ ಭಾರಿ ನಷ್ಟ – ಬಿಜೆಪಿ ಮುಖಂಡ ಮಾತ್ರೆ ಸೇವಿಸಿ ಆತ್ಮಹತ್ಯೆ

Spread the love

ಕೆ.ಆರ್.ಪೇಟೆ ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ವಳಗೆರೆಮೆಣಸ ತೇಜಸ್ ಗೌಡ(38) ವಿಷದ ಮಾತ್ರೆ ನುಂಗಿ ಆತ್ಯಹತ್ಯೆಗೆ ಶರಣಾಗಿದ್ದಾರೆ.

ವ್ಯವಹಾರದಲ್ಲಿ ಲಕ್ಷಾಂತರ ರೂ ನಷ್ಟ ವಾಗಿತ್ತು.ಇದರಿಂದ ಜೀವನದಲ್ಲಿ ಜಿಗುಪ್ಸೆ ಗೊಂಡ ಬಿಜೆಪಿ ಮುಖಂಡ, ತಾಲೂಕು ಪ್ರಾಥಮಿಕ ಭೂ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕ ತೇಜಸ್ ಗೌಡ ನಿನ್ನೆ ರಾತ್ರಿ ವಳಗೆರೆಮೆಣಸದ ತಮ್ಮ ಮನೆಯಲ್ಲಿ ವಿಷಪೂರಿತ ಕಾಳಿನ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ತಕ್ಷಣ ಅವರನ್ನು ಕೆ.ಆರ್.ಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗದ ಮಧ್ಯದಲ್ಲಿಯೇ ಕೊನೆಯುಸಿರೆಳೆದರು.

vermicompost 1111

ತೇಜಸ್ ಅವರ ಮೃತ ದೇಹವನ್ನು ಕೆ.ಆರ್.ಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಕೆ.ಆರ್.ಪೇಟೆ ಪಟ್ಟಣ ಪೋಲಿಸರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!