ಬೈಕ್‍ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ದುರಂತ ಸಾವು ಕಂಡ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದ ಬಳಿ ಜರುಗಿದೆ
ನಾಗರಾಜ್(43), ವೀರೇಶ್ (15), ಸಂತೋಷ (13), ಶೈಲಜ (40) ಮೃತರು.
ಚನ್ನಗಿರಿ ತಾಲೂಕಿನ ಹೆಬ್ಬಳಗೆರೆ ಗ್ರಾಮದ ಬಂಧುಗಳ ಮನೆಯಲ್ಲಿ ಊಟ ಮುಗಿಸಿಕೊಂಡು ತಡರಾತ್ರಿ ಸ್ವಗ್ರಾಮ ಬಿದುರ್ಗಕ್ಕೆ ತೆರಳುತಿದ್ದರು.
ಈ ವೇಳೆ ಚಿತ್ರದುರ್ಗದಿಂದ ಬರುತ್ತಿದ್ದ ಖಾಸಗಿ ಬಸ್‍ವೊಂದು ಓವರ್ ಟೇಕ್ ಮಾಡಿ ಮುನ್ನುಗ್ಗುವಾಗ ಎದುರು ಬರುತ್ತಿದ್ದ ಬೈಕ್‍ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಅವಘಡಕ್ಕೆ ಖಾಸಗಿ ಬಸ್ ಚಾಲಕನ ಅಜಾಗರೂಕತೆಯೇ ಕಾರಣದ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.
ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
- ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
More Stories
ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !