ಭಾರೀ ಗಾಳಿಗೆ ಮರ ಬಿದ್ದು ಸ್ಥಳದಲ್ಲೇ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಬಾಗೂರು ರಸ್ತೆಯ ಮಾಳೆಕೊಪ್ಪಲು ಗ್ರಾಮದಲ್ಲಿ ನಡೆದಿದೆ. ರಂಗಶೆಟ್ಟಿ (40) ಮೃತ ದುರ್ದೈವಿ.
ಸತತವಾಗಿ ಸುರಿಯುತ್ತಿರುವ ಭಾರೀ ಪ್ರಮಾಣದ ಗಾಳಿ ಸಹಿತ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಗಾಳಿ ಸಹಿತ ಮಳೆಗೆ ಬೃಹತ್ ಮರವೊಂದು ಓರ್ವ ಬೈಕ್ ಸವಾರನ ಮೇಲೆ ಬಿದ್ದಿದೆ. ಬೃಹತ್ ಮರದ ಕೆಳಗೆ ಸಿಲುಕಿ ನರಳಾಡಿ ವ್ಯಕ್ತಿಯು ಸಾವನ್ನಪ್ಪಿದ್ದಾನೆ.
ಮೃತ ವ್ಯಕ್ತಿಯು ಕಲ್ಲಸೋಮನಹಳ್ಳಿ ಗ್ರಾಮದ ನಿವಾಸಿ.ಇನ್ನು ಬೈಕ್‌ನಲ್ಲಿ ಚನ್ನರಾಯಪಟ್ಟಣದಿಂದ ತನ್ನ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಎರಡು ಜೆಸಿಬಿ, ಹಿಟಾಚಿ ಯಂತ್ರ ಬಳಸಿ ಮೃತ ವ್ಯಕ್ತಿಯ ಶವ ಹೊರತೆಗಿದ್ದಾರೆ. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು