December 22, 2024

Newsnap Kannada

The World at your finger tips!

WhatsApp Image 2023 06 29 at 3.08.23 PM

Billionaire KR Puram Tehsildar Ajith Rai suspended ಕೋಟ್ಯಾಧಿಪತಿ ಕೆ ಆರ್ ಪುರಂ ತಹಶೀಲ್ದಾರ್ ಅಜಿತ್ ರೈ ಅಮಾನತ್ತು

ಕೋಟ್ಯಾಧಿಪತಿ ಕೆ ಆರ್ ಪುರಂ ತಹಶೀಲ್ದಾರ್ ಅಜಿತ್ ರೈ ಅಮಾನತ್ತು

Spread the love

ಬೆಂಗಳೂರು : ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದಲ್ಲಿ ಲೋಕಾಯುಕ್ತ ಪೊಲೀಸರ ವಶದಲ್ಲಿರುವ ಕೆ.ಆರ್‌. ಪುರಂ ತಹಶೀಲ್ದಾರ್‌ ಅಜಿತ್‌ ರೈ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

ಅನುಕಂಪದ ಆಧಾರದಲ್ಲಿ ಕಂದಾಯ ಇಲಾಖೆಯಲ್ಲಿ ಕೆಲಸ ಪಡೆದುಕೊಂಡಿದ್ದ ಅಜಿತ್‌ ರೈ ನಂತರ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಬಡ್ತಿ ಪಡೆದಿದ್ದರು.

ಪ್ರಸ್ತುತ ಕೆ.ಆರ್‌. ಪುರಂನಲ್ಲಿ ತಹಶೀಲ್ದಾರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಆದಾಯಕ್ಕಿಂತ ಶೇ 69ರಷ್ಟು ಹೆಚ್ಚುವರಿ ಆಸ್ತಿ ಹೊಂದಿರುವ ಆರೋಪದಲ್ಲಿ ಅಜಿತ್ ರೈ ಅಮಾನತು ಮಾಡಲಾಗಿದೆ

ಲೋಕಾಯುಕ್ತ ಪೋಲಿಸರ ದಾಳಿ ವೇಳೆ 40 ಲಕ್ಷ ರು ನಗದು, ಕೋಟ್ಯಂತರ ಮೌಲ್ಯದ ಭೂ ದಾಖಲಾತಿ ಪತ್ರಗಳು, ದುಬಾರಿ ಬೆಲೆಯ ಕಾರು ಖರೀದಿಸಿದ ರಶೀದಿಗಳು, ದೇಶ-ವಿದೇಶಿ ಬ್ರ್ಯಾಂಡ್‌ನ ಮದ್ಯ ಪತ್ತೆಯಾಗಿತ್ತು.ಶೇ 70 ರಷ್ಟು ಜನಪ್ರತಿನಿಧಿಗಳಿಗೆ ಆಸ್ತಿ ವಿವರ ಸಲ್ಲಿಸಲು ಆಸಕ್ತಿ ಇಲ್ಲ – ಲೋಕಾಯುಕ್ತ

ಸತತ 30 ಗಂಟೆಗಳ ಪರಿಶೀಲನೆ ವೇಳೆ ಅಕ್ರಮ ಆಸ್ತಿ ಗಳಿಕೆ ಮಾಡಿರುವುದು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಅಜಿತ್ ರೈನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು.

Copyright © All rights reserved Newsnap | Newsever by AF themes.
error: Content is protected !!