ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಗಳ ಶಿಕ್ಷಕರಿಗೆ ಬಯೋಮೆಟ್ರಿಕ್ ಹಾಜರಿ ಕಡ್ಡಾಯ

Team Newsnap
1 Min Read

ಶಾಲಾ ಶಿಕ್ಷಕರಿಗೆ ಇನ್ನು ಮುಂದೆಶಾಲೆ ಆರಂಭಕ್ಕೆ 15 ನಿಮಿಷ ಮುಂಚೆ ಬಂದು ಕಡ್ಡಾಯವಾಗಿ ಬಯೋಮೆಟ್ರಿಕ್ ಹಾಜರಿ ಹಾಕಬೇಕು ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ನಮ್ಮ ಬೆಂಗಳೂರು ನಮ್ಮ ಹೆಮ್ಮೆ – ಸೂರು ಕೊಟ್ಟ ಊರಿಗೆ ಋಣವಾಗಿರೋಣ – ಚಿತ್ರಸಾಹಿತಿ ಕವಿರಾಜ್

ಶಿಕ್ಷಣ ಇಲಾಖೆ ಆದೇಶದಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಮತ್ತು ಕಚೇರಿ ಸಿಬ್ಬಂದಿ ವರ್ಗ ನಿಗದಿತ ಅವಧಿಗಿಂತ ಕನಿಷ್ಟ 15 ನಿಮಿಷ ಮುಂಚಿತವಾಗಿ ಕರ್ತವ್ಯಕ್ಕೆ ಹಾಜರಾಗಿ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು. ರಜೆ ಮೇಲೆ ತೆರಳುವಾಗ ಸಂಬಂಧಪಟ್ಟ ಮೇಲಾಧಿಕಾರಿಗಳಿಂದ ಪೂರ್ವಾನುಮತಿ ಮಂಜೂರು ಪಡೆದು ತೆರಳಬೇಕು ಎಂದು ತಿಳಿಸಿದೆ.

ವೇತನ ಬಟವಾಡೆ ಅಧಿಕಾರಿಗಳು ತಮ್ಮ ಅಧೀನ ಕಚೇರಿ ಮತ್ತು ಶಾಲೆಗಳ ಬಯೋಮೆಟ್ರಿಕ್ ಹಾಜರಾತಿ ಚೆಕ್ ಇನ್ ಮತ್ತು ಚೆಕ್ ಔಟ್ ಹಾರ್ಡ್/ಸಾಫ್ಟ್ ದಾಖಲೆಗಳನ್ನು ಪ್ರತಿ ತಿಂಗಳ 25 ನೇ ತಾರೀಖಿನೊಳಗೆ ಪಡೆದು ಅದಕ್ಕೆ ಅನುಗುಣವಾಗಿ ವೇತನ ಪಾವತಿಸಲು ತಿಳಿಸಿದೆ.

Share This Article
Leave a comment