ಕೇರಳದಲ್ಲಿ ಹಕ್ಕಿ ಜ್ವರದ ಭೀತಿ – 6,000ಕ್ಕೂ ಹೆಚ್ಚು ಪಕ್ಷಿಗಳ ಹತ್ಯೆ

Team Newsnap
1 Min Read
Bird flu scare in Kerala – over 6,000 birds killed ಕೇರಳದಲ್ಲಿ ಹಕ್ಕಿ ಜ್ವರದ ಭೀತಿ – 6,000ಕ್ಕೂ ಹೆಚ್ಚು ಪಕ್ಷಿಗಳ ಹತ್ಯೆ

ಕೇರಳದ ( Kerala ) ಕೊಟ್ಟಾಯಂ ಜಿಲ್ಲೆಯ 3 ಪಂಚಾಯಿತಿಗಳಲ್ಲಿ ಏಕಾಏಕಿ ಹಕ್ಕಿ ಜ್ವರ ( Bird Flu ) ದೃಢಪಟ್ಟಿದೆ, ಈ ಹಿನ್ನೆಲೆಯಲ್ಲಿ 6,000ಕ್ಕೂ ಅಧಿಕ ಪಕ್ಷಿಗಳನ್ನು ಹತ್ಯೆ ಮಾಡಲಾಗಿದೆ.

ಈಗಾಗಲೇ ಜಗತ್ತಿನಾದ್ಯಂತ ಕೊರೊನಾ ಭೀತಿ ಆವರಿಸಿದೆ, ಈ ಮಧ್ಯೆ ದೇಶದಲ್ಲಿ ಹಕ್ಕಿ ಜ್ವರ ಸದ್ದು ಮಾಡುತ್ತಿದೆ.ಬೆಂಗಳೂರಿನಲ್ಲಿ ದುರಂತ- 19ನೇ ಮಹಡಿಯಿಂದ ಜಂಪ್ : ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಕೇರಳದ ಕೊಟ್ಟಾಯಂ ಜಿಲ್ಲೆಯ ವೇಚೂರು, ನಿಂದೂರು ಮತ್ತು ಅರ್ಪೂಕರ ಪಂಚಾಯಿತಿ ವ್ಯಾಪ್ತಿಯಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಈ ಬೆನ್ನಲ್ಲೇ 6,017 ಪಕ್ಷಿಗಳನ್ನು ಸಂಹರಿಸಲಾಗಿದೆ. ಅದರಲ್ಲೂ ಹೆಚ್ಚಾಗಿ ಬಾತುಕೋಳಿಗಳಿವೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಕೇರಳದ ವೇಚೂರಿನಲ್ಲಿ ಸುಮಾರು 133 ಬಾತುಕೋಳಿಗಳು ಮತ್ತು 156 ಕೋಳಿಗಳು, ನಿಂದೂರಿನಲ್ಲಿ 2,753 ಬಾತುಕೋಳಿಗಳು ಮತ್ತು ಅರ್ಪೂಕರದಲ್ಲಿ 2,975 ಬಾತುಕೋಳಿಗಳನ್ನು ಹತ್ಯೆ ಮಾಡಲಾಗಿದೆ.

Share This Article
Leave a comment