ಚೆಕ್‌ಪೋಸ್ಟ್‌ನಲ್ಲಿ ಪಕ್ಷಿಗಳ ಸಾಗಾಣಿಕೆಗೆ ನಿರ್ಬಂಧ: ಜಿಲ್ಲಾಧಿಕಾರಿ ರೋಹಿಣಿ

Team Newsnap
1 Min Read
Rohini Sindhuri's husband Sudhir grab land in Yalahanka? Complaint via tweet to DGP ರೋಹಿಣಿ ಸಿಂಧೂರಿ ಪತಿ ಸುಧೀರ್ ಯಲಹಂಕದಲ್ಲಿ ಭೂ ಕಬಳಿಕೆ ? ಡಿಜಿಪಿಗೆ ಟ್ವೀಟ್ ಮೂಲಕ ದೂರು

ಕೇರಳ ರಾಜ್ಯದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಗಡಿ ಭಾಗದಲ್ಲಿ ಬರುವ ಹೆಚ್.ಡಿ.ಕೋಟೆ ತಾಲ್ಲೂಕಿನ ಬಾವಲಿ ಚೆಕ್‌ಪೋಸ್ಟ್‌ ಮೂಲಕ ಕೋಳಿ ಮತ್ತು ಇತರೆ ಪಕ್ಷಿಗಳ ಸಾಗಾಣಿಕೆಯನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.

ಕೇರಳದಿಂದ ಬಾವಲಿ ಚೆಕ್ ಪೋಸ್ಟ್ ಮೂಲಕ ಬರುವ ವಾಹನಗಳನ್ನು ಸ್ಯಾನಿಟೈಜ್ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಟ್ಟೆಚ್ಚರ ವಹಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಕೋಳಿಗಳು, ಹಿತ್ತಲಕೋಳಿಗಳು, ಹಕ್ಕಿಗಳು, ಕಾಡುಹಕ್ಕಿಗಳು, ವಲಸೆ ಹಕ್ಕಿಗಳು ಯಾವುದೇ ಹಕ್ಕಿಗಳಲ್ಲಿ ಅಸ್ವಾಭಾವಿಕ ರೋಗ ಲಕ್ಷಣಗಳು ಕಂಡುಬಂದಲ್ಲಿ ಅಥವಾ ಅಸ್ವಾಭಾವಿಕ ಮರಣ ಸಂಭವಿಸಿದಲ್ಲಿ ಕೂಡಲೆ ಪಾಶುಪಾಲನ ಇಲಾಖಾ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು.

ಅಧಿಕಾರಿಗಳು ತೀವ್ರ ನಿಗಾವಹಿಸಿ ಹಕ್ಕಿ ಜ್ವರ ಸಂಭವನೀಯತೆಯನ್ನು ಪರಿಗಣಿಸಿ ಸಂಬಂಧ ಪಟ್ಟ ಪ್ರಯೋಗಾಲಯಕ್ಕೆ ರೋಗ ವಿಶ್ಲೇಷಣೆ ನಡೆಸುವ ಬಗ್ಗೆ ಕ್ರಮ ವಹಿಸಲು ಇಲಾಖೆಯ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಹೇಳಿದರು.

ಜೀವಂತ ಕೋಳಿ ಹಾಗೂ ಕೋಳಿ ಮಾಂಸ ಮಾರಾಟ ಕೇಂದ್ರಗಳು ಮತ್ತು ಕೋಳಿ ಸಾಗಾಣಿಕೆ ವಾಹನಗಳ ಚಲನ ವಲನದ ಬಗ್ಗೆ ನಿಗಾ ವಹಿಸಲು ಹಾಗೂ ಸಂದರ್ಭಾನುಸಾರ ಸೂಕ್ತ ಕ್ರಮ ವಹಿಸಿ ಮಾಹಿತಿ ನೀಡಲು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

Share This Article
Leave a comment