December 23, 2024

Newsnap Kannada

The World at your finger tips!

SIDDU

75ನೇ ವಸಂತದ ಗಡಿ ತಲುಪಿದ ಸಿದ್ದು : ಹುಬ್ಬಳ್ಳಿಯ ಖಾಸಗಿ ಹೋಟೆಲ್​ನಲ್ಲಿ ಹುಟ್ಟುಹಬ್ಬ ಆಚರಣೆ​

Spread the love

ಆಗಸ್ಟ್ 3 ರಂದು 75 ನೇ ವಸಂತದ ಗಡಿ ತಲುಪಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟುಹಬ್ಬವನ್ನು ಮಂಗಳವಾರ ಮಧ್ಯರಾತ್ರಿ 12 ಗಂಟೆಗೆ ಹುಬ್ಬಳ್ಳಿಯ ಖಾಸಗಿ ಹೋಟೆಲ್​ನಲ್ಲಿ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಕೇಕ್​ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು.

ಕಾಂಗ್ರೆಸ್​ನಲ್ಲಿ ಸದ್ಯ ಸಿದ್ದು ಮತ್ತು ಡಿ.ಕೆ. ಶಿವಕುಮಾರ್​ ಎಂಬ ಎರಡು ಬಣ ಇರುವುದು ಎಲ್ಲರಿಗೂ ತಿಳಿದಿರುವ ಸಂಗತಿ. ಆದರೆ, ಹುಟ್ಟುಹಬ್ಬ ಆಚರಣೆ ವೇಳೆ ಮನಸ್ತಾಪಗಳನ್ನು ಬದಿಗಿಟ್ಟು ಪರಸ್ಪರ ಕೇಕ್​ ತಿನ್ನಿಸಿ ಸಂಭ್ರಮಿಸುವ ಮೂಲಕ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂಬ ಸಂದೇಶವನ್ನು ಸಾರುವ ಪ್ರಯತ್ನ ಮಾಡಿದರು.

ಡಿಕೆಶಿ ಮಾತ್ರವಲ್ಲದೆ, ಕೆ.ಜೆ. ಜಾರ್ಜ್​ ಮತ್ತು ಆರ್​.ವಿ. ದೇಶಪಾಂಡೆ ಸೇರಿದಂತೆ ಅನೇಕ ಕಾಂಗ್ರೆಸ್​ ನಾಯಕರು ಸಿದ್ದು ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಭಾಗಿಯಾದರು. ನೆಚ್ಚಿನ ನಾಯಕನಿಗೆ ಕೇಕ್​ ತಿನ್ನಿಸಿ ಶುಭಕೋರಿದರು.

ಸಿದ್ದರಾಮಯ್ಯ ಅವರು 75ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರಿಗೆ ಅಭಿನಂದನೆ ಸಲ್ಲಿಸಲು ದಾವಣಗೆರೆಯಲ್ಲಿ ಬುಧವಾರ ಸಿದ್ದರಾಮೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಸಹ ಪಾಲ್ಗೊಳ್ಳಲಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಜನರು ಕಾರ್ಯಕ್ರಮಕ್ಕೆ ಆಗಮಿಸಲಿದ್ದು, ದಾವಣಗೆರೆಯಲ್ಲಿ ಬೃಹತ್​ ವೇದಿಕೆ ಸಜ್ಜಾಗಿದೆ. ಆದರೆ, ಸಿದ್ದರಾಮೋತ್ಸವಕ್ಕೆ ಮಳೆ ಭೀತಿ ಎದುರಾಗಿದೆ.

Copyright © All rights reserved Newsnap | Newsever by AF themes.
error: Content is protected !!