ಆಗಸ್ಟ್ 3 ರಂದು 75 ನೇ ವಸಂತದ ಗಡಿ ತಲುಪಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟುಹಬ್ಬವನ್ನು ಮಂಗಳವಾರ ಮಧ್ಯರಾತ್ರಿ 12 ಗಂಟೆಗೆ ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು.
ಕಾಂಗ್ರೆಸ್ನಲ್ಲಿ ಸದ್ಯ ಸಿದ್ದು ಮತ್ತು ಡಿ.ಕೆ. ಶಿವಕುಮಾರ್ ಎಂಬ ಎರಡು ಬಣ ಇರುವುದು ಎಲ್ಲರಿಗೂ ತಿಳಿದಿರುವ ಸಂಗತಿ. ಆದರೆ, ಹುಟ್ಟುಹಬ್ಬ ಆಚರಣೆ ವೇಳೆ ಮನಸ್ತಾಪಗಳನ್ನು ಬದಿಗಿಟ್ಟು ಪರಸ್ಪರ ಕೇಕ್ ತಿನ್ನಿಸಿ ಸಂಭ್ರಮಿಸುವ ಮೂಲಕ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂಬ ಸಂದೇಶವನ್ನು ಸಾರುವ ಪ್ರಯತ್ನ ಮಾಡಿದರು.
ಡಿಕೆಶಿ ಮಾತ್ರವಲ್ಲದೆ, ಕೆ.ಜೆ. ಜಾರ್ಜ್ ಮತ್ತು ಆರ್.ವಿ. ದೇಶಪಾಂಡೆ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಸಿದ್ದು ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಭಾಗಿಯಾದರು. ನೆಚ್ಚಿನ ನಾಯಕನಿಗೆ ಕೇಕ್ ತಿನ್ನಿಸಿ ಶುಭಕೋರಿದರು.
ಸಿದ್ದರಾಮಯ್ಯ ಅವರು 75ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರಿಗೆ ಅಭಿನಂದನೆ ಸಲ್ಲಿಸಲು ದಾವಣಗೆರೆಯಲ್ಲಿ ಬುಧವಾರ ಸಿದ್ದರಾಮೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಪಾಲ್ಗೊಳ್ಳಲಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಜನರು ಕಾರ್ಯಕ್ರಮಕ್ಕೆ ಆಗಮಿಸಲಿದ್ದು, ದಾವಣಗೆರೆಯಲ್ಲಿ ಬೃಹತ್ ವೇದಿಕೆ ಸಜ್ಜಾಗಿದೆ. ಆದರೆ, ಸಿದ್ದರಾಮೋತ್ಸವಕ್ಕೆ ಮಳೆ ಭೀತಿ ಎದುರಾಗಿದೆ.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment