ಕೊರೊನಾರೂಪ ಬದಲಿಸಿಕೊಂಡು ಮತ್ತೆ ಹೆಮ್ಮಾರಿ ಕರಾಳತೆಯನ್ನು ತೋರಲು ಆರಂಭಿಸಿದೆ, ರಾಜ್ಯದ ರಾಜಧಾನಿ ಬೆಂಗಳೂರಿಗೂ ಆತಂಕ ಶುರುವಾಗಿದೆ.
ಈ ನಡುವೆ ಬರ್ತ್ ಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದ 10ಕ್ಕೂ ಹೆಚ್ಚು ಮಂದಿಗೆ ಕೊರೊನಾ ಪಾಸಿಟಿವ್ ವರದಿ ಬಂದಿರುವ ಘಟನೆ ಕೋರಮಂಗಲದ ರಹೇಜ ರೆಸಿಡೆನ್ಸಿ ಅಪಾರ್ಟ್ಮೆಂಟ್ ನ ಫ್ಲಾಟ್ ನಲ್ಲಿ ನಡೆದಿದೆ.
ಬಿಬಿಎಂಪಿ ಸದ್ಯ ಅಪಾರ್ಟ್ಮೆಂಟ್ ನ ಫ್ಲಾಟ್ ಅನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಣೆ ಮಾಡಿದ್ದು, ಎಲ್ಲರ ಸ್ಯಾಂಪಲ್ ಗಳನ್ನ ಜೀನೋಮ್ ಸೀಕ್ವೆನ್ಸಿಂಗ್ ಗೆ ಕಳುಹಿಸಿಕೊಟ್ಟಿದೆ.
ಕೆಲ ದಿನಗಳ ಹಿಂದೆಯಷ್ಟೇ ಅಪಾರ್ಟ್ಮೆಂಟ್ ನ ಫ್ಲಾಟ್ನಲ್ಲಿ ಬರ್ತ್ಡೇ ಪಾರ್ಟಿ ನಡೆಸಲಾಗಿತ್ತು.
ಪಾರ್ಟಿಯಲ್ಲಿ 16ಕ್ಕೂ ಹೆಚ್ಚು ಮಂದಿ ಸೇರಿದ್ದರು. ಇದರಲ್ಲಿ 10 ಮಂದಿಯ ವರದಿ ಪಾಸಿಟವ್ ಬಂದಿದೆ.
ಸದ್ಯ ಅಪಾರ್ಟ್‌ಮೆಂಟ್ ಗೆ ಆರೋಗ್ಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬರ್ತ್ ಡೇ ಪಾರ್ಟಿ ಗೆ ಬಂದಿರುವ ಎಲ್ಲಾ ಜನರ ಸ್ವಾಬ್ ಅನ್ನು ಸ್ವೀಕರಿಸಿದ್ದಾರೆ. ಅಲ್ಲದೇ ಅಪಾರ್ಟ್ಮೆಂಟ್ ನ ಫ್ಲಾಟ್ ಜೊತೆಗೆ ಬರ್ತ್ಡೇ ಪಾರ್ಟಿಗೆ ಬಂದಿರುವ ಸಂಬಂಧಿಕರ ಮನೆಗಳನ್ನೂ ಕಂಟೈನ್ಮೆಂಟ್ ಜೋನ್ ಎಂದು ಗುರುತು ಮಾಡಿ, ಎಲ್ಲರ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ.
- 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
- ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
More Stories
4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ