December 19, 2024

Newsnap Kannada

The World at your finger tips!

bitcoin newsnap

ಬಿಟ್‌ಕಾಯಿನ್ ವಹಿವಾಟುಗಳ ಕುರಿತು ಯಾವುದೇ ಡೇಟಾ ಇಲ್ಲ -ಕೇಂದ್ರ ಹಣಕಾಸು ಸಚಿವೆ

Spread the love

ದೇಶದಲ್ಲಿ ಕ್ರಿಪ್ಟೋಕರೆನ್ಸಿಯನ್ನು [Crypto] ಕಾನೂನುಬದ್ಧ ಟೆಂಡರ್ ಆಗಿ ಸ್ವೀಕರಿಸುವ ಯಾವುದೇ ಯೋಜನೆಯನ್ನು ಕೇಂದ್ರ ಸರ್ಕಾರ ಹೊಂದಿಲ್ಲ

ಈ ವಿಷಯವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿ, ಇತ್ತೀಚೆಗಿನ ದಿನಗಳಲ್ಲಿ ಭಾರತದಲ್ಲಿ ಬಿಟ್​ಕಾಯಿನ್ ವಹಿವಾಟು ಸದ್ದಿಲ್ಲದೇ ಹೆಚ್ಚುತ್ತಿದೆ ಎಂದು ಲೋಕಸಭೆ ಕಲಾಪದಲ್ಲಿ ಪ್ರಶ್ನೆಗೆ ಉತ್ತರಿಸಿದರು

ಲಿಖಿತ ರೂಪದಲ್ಲಿ ಉತ್ತರ ನೀಡಿರುವ ಕೇಂದ್ರ ಹಣಕಾಸು ಸಚಿವೆ, ಬಿಟ್​ಕಾಯಿನ್​​ಗೆ (Bitcoin) ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಯಾವುದೇ ದಾಖಲೆಗಳು ನಮ್ಮ ಬಳಿ ಇಲ್ಲ ಎಂದು ತಿಳಿಸಿದ್ದಾರೆ.

ಚಳಿಗಾಲದ ಸಂಸತ್​ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಕ್ರಿಪ್ಟೋಕರೆನ್ಸಿ ಅಂಡ್ ರೆಗ್ಯೂಲೇಷನ್ ಆಫ್ ಆಫೀಷಲ್ ಡಿಜಿಟಲ್ ಕರೆನ್ಸಿ (Digital currency) ಬಿಲ್​-2021 ಪ್ರಸ್ತಾಪ ಮಾಡಲಿದೆ. ಕೆಲವು ವಿನಾಯತಿಗಳನ್ನು ಹೊರತುಪಡಿಸಿ ಎಲ್ಲಾ ಖಾಸಗಿ ಕ್ರಿಪ್ಟೋಕರೆನ್ಸಿಯನ್ನು ದೇಶದಲ್ಲಿ ಬ್ಯಾನ್ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು.

Copyright © All rights reserved Newsnap | Newsever by AF themes.
error: Content is protected !!