ರಾಜ್ಯದಲ್ಲಿ ನಡೆಯುವ ಎರಡು ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿಯನ್ನ ಪ್ರಕಟ ಮಾಡಿದೆ.
ಹಾನಗಲ್ ವಿಧಾನಸಭೆ ಕ್ಷೇತ್ರದಿಂದ ಶಿವರಾಜ್ ಸಜ್ಜನರ್ ರನ್ನು , ಸಿಂದಗಿ ಕ್ಷೇತ್ರದಿಂದ ರಮೇಶ್ ಭೂಸನೂರು ಅವರನ್ನು ಅಖಾಡಕ್ಕೆ ಇಳಿಸಿದೆ.
ಹಾವೇರಿ ಜಿಲ್ಲೆಯ ಹಾನಗಲ್ ಬೈ-ಎಲೆಕ್ಷನ್ ಟಿಕೆಟ್ ಲೆಕ್ಕಾಚಾರ ಉಲ್ಟಾಪಲ್ಟಾ ಆಗಿದೆ. ಅಚ್ಚರಿ ಎಂಬಂತೆ ಮಾಜಿ ಶಾಸಕ ಹಾಗೂ ಎಂಎಲ್ಸಿ ಶಿವರಾಜ್ ಸಜ್ಜನರ್ಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿದೆ. ಈ ಹಿಂದೆ ಶಿವರಾಜ್ರನ್ನು ದಿ. ಸಿಎಂ ಉದಾಸಿ ಬಿಜೆಪಿಗೆ ಕರೆದುಕೊಂಡು ಬಂದು ಸೂಕ್ತ ರಾಜಕೀಯ ಸ್ಥಾನಮಾನ ನೀಡಿದ್ದರು.
ಹೀಗಾಗಿ ಶಿವರಾಜ್ ಸಜ್ಜನರ್ ಉದಾಸಿ ಅವರ ಮಾನಸಪುತ್ರ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. 2004 ರಲ್ಲಿ ಹಾವೇರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿದ್ದರು. 2013- 2018ರಲ್ಲಿ ಹಾವೇರಿ ಬಿಜೆಪಿ ಜಿಲ್ಲಾಧ್ಯಕ್ಷರಾಗಿಯೂ ಪಕ್ಷಕ್ಕೆ ಸೇವೆ ಸಲ್ಲಿಸಿದ್ದಾರೆ.
ಸಿಎಂ ಉದಾಸಿ ಕುಟುಂಬಕ್ಕೆ ಬಿಜೆಪಿ ಟಿಕೆಟ್ ನೀಡಲಿದೆ ಎಂದು ಹೇಳಲಾಗಿತ್ತು. ಅದರಂತೆ ಸಂಸದ ಶಿವಕುಮಾರ್ ಉದಾಸಿ ಪತ್ನಿ ರೇವತಿ ಅವರ ಹೆಸರು ಮುಂಚೂಣಿಯಲ್ಲಿತ್ತು. ಆದರೆ ಕೊನೆ ಘಳಿಗೆಯಲ್ಲಿ ಬಿಜೆಪಿ ಹೈಕಮಾಂಡ್, ಶಿವರಾಜ್ ಅವರಿಗೆ ಟಿಕೆಟ್ ನೀಡಿದೆ. ಅ.30 ರಂದು ಉಪಚುನಾವಣೆ ನಡೆಯಲಿದೆ.
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
More Stories
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು