March 31, 2023

Newsnap Kannada

The World at your finger tips!

election , congress , BJP

BJP Bankar, JDS Srinivas, Ningappa, Mallikarjuna to Congress . BJP ಬಣಕಾರ್, JDS ಶ್ರೀನಿವಾಸ್, ನಿಂಗಪ್ಪ, ಮಲ್ಲಿಕಾರ್ಜುನ ಕಾಂಗ್ರೆಸ್ ತೆಕ್ಕೆಗೆ

BJP ಬಣಕಾರ್, JDS ಶ್ರೀನಿವಾಸ್, ನಿಂಗಪ್ಪ, ಮಲ್ಲಿಕಾರ್ಜುನ ಕಾಂಗ್ರೆಸ್ ತೆಕ್ಕೆಗೆ

Spread the love

ರಾಜ್ಯದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ ಬಿಜೆಪಿಯ ಓರ್ವ ಹಾಗೂ ಜೆಡಿಎಸ್ ನ ಮೂವರು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಹಿರೇಕೇರೂರು ಬಿಜೆಪಿ ಮಾಜಿ ಶಾಸಕ ಯು ಬಿ ಬಣಕಾರ್, ತುಮಕೂರು ಗ್ರಾಮಾಂತರ ಜೆಡಿಎಸ್ ಮಾಜಿ ಶಾಸಕ ಎಚ್ ನಿಂಗಪ್ಪ, ಬಿಜಾಪುರದ ಮಲ್ಲಿಕಾರ್ಜುನ ರೋಣಿ ಹಾಗೂ ಕೂಡ್ಲಗಿಯ ಜೆಡಿಎಸ್ ಮುಖಂಡ ಡಾ. ಎನ್ ಟಿ ಶ್ರೀನಿವಾಸ್ ತಮ್ಮ ಅಪಾರ ಬೆಂಬಲಿಗರೊಙದಿಗೆ ಇಂದು ಕಾಂಗ್ರೆಸ್ ಪಕ್ಷಕ್ಜೆ ಸೇರ್ಪಡೆಯಾದರು.ಮದ್ದೂರಿನಲ್ಲಿ ರೌಡಿಶೀಟರ್ ನನ್ನು ಹತ್ಯೆ ಮಾಡಿದ ಗೆಳೆಯರ ಗುಂಪು 

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್, ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹಾಗೂ ಇತರ ನಾಯಕರು ಪಕ್ಷದ ಬಾವುಟ ನೀಡಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಿವಕುಮಾರ್, ಕಾಂಗ್ರೆಸ್ ಪಕ್ಷಕ್ಕೆ ಸೇರುವವರ ದೊಡ್ಡ ಪಟ್ಟಿ ಇದೆ.ಇದನ್ನು ಒಂದೇ ಬಾರಿ ಬಿಡುಗಡೆ ಮಾಡುವುದಿಲ್ಲ. ಇಂದು ಶುಭ ಮುಹೂರ್ತ, ಶುಭ ಗಳಿಗೆಯಲ್ಲಿ ಬೇರೆ ಪಕ್ಷದ ನಾಯಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.

ಈ ನಾಯಕರೆಲ್ಲರೂ ಪಕ್ಷದ ಸಿದ್ಧಾಂತ ಒಪ್ಪಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವವನ್ನು ಒಪ್ಪಿ, ಯಾವುದೇ ಷರತ್ತು ಇಲ್ಲದೇ ಪಕ್ಷ ಸೇರ್ಪಡೆಯಾಗಿದ್ದಾರೆ ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ಶಿವಕುಮಾರ್, ಕಾಂಗ್ರೆಸ್ ಪಕ್ಷಕ್ಕೆ ಸೇರುವವರ ದೊಡ್ಡ ಪಟ್ಟಿ ಇದೆ.ಈ ನಾಯಕರೆಲ್ಲರೂ ಯಾವುದೇ ಷರತ್ತು ಇಲ್ಲದೇ ಪಕ್ಷ ಸೇರ್ಪಡೆಯಾಗಿದ್ದಾರೆ ಎಂದರು.

error: Content is protected !!