ಬೆಂಗಳೂರು: ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರು ಬಿಜೆಪಿ ಮೇಲೆ ದ್ರೋಹ ಬಗೆದಿದ್ದಾರೆ. ಉಪಚುನಾವಣೆಯಲ್ಲಿ ಚನ್ನಪಟ್ಟಣದ ಜನತೆ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಯೋಗೇಶ್ವರ್ ಗೆ ಟಿಕೆಟ್ ಕೊಡಿಸಲು ಕೊನೆಯ ಕ್ಷಣದವರೆಗೂ ಎಲ್ಲಾ ಪ್ರಯತ್ನ ಮಾಡಿದ್ದೆವು. ಆದರೆ, ಅವರು ಏಕಾಏಕಿ ಕಾಂಗ್ರೆಸ್ ಸೇರಿದ್ದಾರೆ. ಈ ಬಾರಿ ಕ್ಷೇತ್ರದ ಜನತೆ ಅವರಿಗೆ ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.
ಇದನ್ನು ಓದಿ – ಬೆಂಗಳೂರು ಕಟ್ಟಡ ಕುಸಿತ: ಸಾವಿನ ಸಂಖ್ಯೆ 8ಕ್ಕೆ ಏರಿಕೆ, ಮಾಲೀಕನ ಬಂಧನ
ಯೋಗೇಶ್ವರ್ ಬಿಜೆಪಿ ತತ್ವ ಸಿದ್ದಾಂತಗಳನ್ನು ಒಪ್ಪಿಕೊಂಡು ಪಕ್ಷದಲ್ಲಿ ಇರಲಿಲ್ಲ, ಮತ್ತು ಅವರು ಪಕ್ಷದ ದೃಷ್ಟಿಕೋಣವನ್ನೂ ಗೌರವಿಸಲಿಲ್ಲ ಎಂದು ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )