ಮಂಡ್ಯದಲ್ಲಿ ಬಿಜೆಪಿ ಸಮಾವೇಶ ನಡೆಸುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರನ್ನು ಭೇಟಿ ಮಾಡಿ ಸೌಹಾರ್ದಯುತವಾಗಿ ಮಾತುಕತೆ ನಡೆಸಿ ಹುಟ್ಟುಹಬ್ಬದ ಶುಭಾಶಯ ಕೋರಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದಂತ ಸಿಎಂ ಅವರು, ರಾಜ್ಯದ ಎಲ್ಲಾ ಭಾಗದಿಂದಲೂ ಬಹಳ ಜನ ಬಿಜೆಪಿಗೆ ಬರುತ್ತಿದ್ದಾರೆ.
ಇದನ್ನು ಓದಿ : ಮದುವೆಗೂ ಮುನ್ನವೇ ಭಾವಿ ಪತಿಯನ್ನು ಬಂಧಿಸಿದ ಮಹಿಳಾ ಸಬ್ ಇನ್ಸ್‌ಪೆಕ್ಟರ್!
ವಿಶೇಷವಾಗಿ ಕೋಲಾರ, ಮಂಡ್ಯದಿಂದ ಹೆಚ್ವು ಜನ ಬರುತ್ತಿದ್ದಾರೆ. ಬ್ಯಾಚ್ ವಾರು ಸೇರ್ಪಡೆ ಮಾಡುವ ಕೆಲಸವಾಗುತ್ತಿದೆ. ಬಹಳ ದೊಡ್ಡ ಪ್ರಮಾಣದಲ್ಲಿ ದಕ್ಷಿಣ ಕರ್ನಾಟಕದಲ್ಲಿ ಸಾರ್ವಜನಿಕರು ಹಾಗೂ ವಿಶೇಷವಾಗಿ ಯುವಕರು ಪಕ್ಷಕ್ಕೆ ಬರಲು ಒಲವು ತೋರುತ್ತಿದ್ದಾರೆ. ಹೀಗಾಗಿ ಮಂಡ್ಯ ಜಿಲ್ಲೆಯಲ್ಲಿ ಹೊಸ ಯುವ ನಾಯಕತ್ವ ಹೊರಹೊಮ್ಮುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಬಿಜೆಪಿಯ ಪರವಾಗಿ ಮಂಡ್ಯದಲ್ಲಿ ಬಹಳ ದೊಡ್ಡ ಶಕ್ತಿಯ ಅಲೆ ಕಾಣುತ್ತಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
ಇದನ್ನು ಓದಿ : 2,500 ಕೋಟಿ ರು ಕೊಡಿ: ಸಿಎಂ ಮಾಡುತ್ತೇವೆ ಅಂದ್ರು: ಯತ್ನಾಳ್ ಹೊಸ ಬಾಂಬ್
ಅಶೊಕ್ ಜಯರಾಂ ಮಾತ್ರ ಅಲ್ಲದೆ ಯಾರು ನಮ್ಮ ಪಕ್ಷದ ಬಗ್ಗೆ ಹಾಗೂ ಪಕ್ಷದ ವಿಚಾರಗಳ ಬಗ್ಗೆ ಒಲವು ತೋರಿಸಿದ್ದಾರೆಯೋ ಅವರೆಲ್ಲ ಬಳಿ ಮಾತನಾಡಲಾಗುವುದು ಎಂದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು