ಬೆಂಗಳೂರು : ಕೆಲವೇ ತಿಂಗಳುಗಳು ಲೋಕಸಭಾ ಚುನಾವಣೆಗೆ ಬಾಕಿ ಇದ್ದು , ಫೆಬ್ರುವರಿ ಕೊನೆಯ ವಾರದಲ್ಲಿ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ .
14ರಿಂದ 16 ಕ್ಷೇತ್ರಗಳ ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತಿದ್ದು ಬಹುತೇಕ ಹಾಲಿ ಸಂಸದರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ .
ಗೃಹ ಸಚಿವ ಅಮಿತ್ ಶಾ ಮೊದಲ ಪಟ್ಟಿ ಪ್ರಕಟಿಸುವ ಬಗ್ಗೆ ಸುಳಿವು ನೀಡಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕೊನೆ ಗಳಿಗೆಯಲ್ಲಿ ಕೆಲ ಕ್ಷೇತ್ರಗಳಿಗೆ ಟಿಕೆಟ್ ಪ್ರಕಟಿಸಿದ್ದರಿಂದ ಬಿಜೆಪಿಗೆ ಹಿನ್ನಡೆಯಾಗಿತ್ತು. ಈ ವಿಷಯ ಸೋಲಿನ ಬಳಿಕ ನಡೆದ ಆತ್ಮಾವಲೋಕನ ಸಭೆಯಲ್ಲೂ ಚರ್ಚೆಯಾಗಿತ್ತು .
ಈ ಬಾರಿ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಬೇಗ ಬಿಡುಗಡೆಯಾಗಲಿದೆ.
ಅಮಿತ್ ಶಾ ಗೆಲುವು ಸ್ಪಷ್ಟ ಇರುವ ಕ್ಷೇತ್ರಗಳ ವರದಿ ಪಡೆದಿದ್ದು , ಮೊದಲ ಪಟ್ಟಿಯಲ್ಲಿ ಬಹುತೇಕ ಗೆಲ್ಲುವ ಹಾಲಿ ಸಂಸದರಿಗೆ ಟಿಕೆಟ್ ಸಿಗಲಿದೆ.ಧರ್ಮಸ್ಥಳದ SDM ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ಅಚ್ಚರಿ ಅಭ್ಯರ್ಥಿ ಹೆಸರು ,ಹೊಸ ಮುಖಗಳನ್ನು ಎರಡು ಮತ್ತು ಮೂರನೇ ಪಟ್ಟಿಯಲ್ಲಿ ಪ್ರಕಟಿಸಲಾಗುವುದು.
More Stories
ನವೆಂಬರ್ 11ರಿಂದ ಉಪ ಚುನಾವಣಾ ಕ್ಷೇತ್ರಗಳಲ್ಲಿ ಮದ್ಯ ಮಾರಾಟ ನಿಷೇಧ
ಮಂಡ್ಯ : ಹಿಂದೂ ಸ್ಮಶಾನವನ್ನು ವಕ್ಫ್ ಆಸ್ತಿಯೆಂದು ಘೋಷಿಸಿದ ಪ್ರಕರಣ
MUDA ಹಗರಣ: ನಾಳೆ ಬೆಳಿಗ್ಗೆ 10 ಗಂಟೆಗೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗಲು ಸಿಎಂ ಸಿದ್ದರಾಮಯ್ಯ ನಿರ್ಧಾರ