ಕೇಸರಿ ಪಡೆಯು ತನ್ನ ಮೊದ ಪಟ್ಟಿಯನ್ನು ಏ 9 ರಂದು ಬಿಡುಗಡೆ ಮಾಡಲಿದೆ .
ದೆಹಲಿಯಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ನಾಯಕರ ಮಹತ್ವದ ಸಭೆ ನಡೆಯಲಿದೆ. ಮೊದಲ ಪಟ್ಟಿ ರಿಲೀಸ್‌ಗೆ ಅಂತಿಮ ಮುದ್ರೆ ಬೀಳಲಿದೆ.
ರಾಜ್ಯ ಕೋರ್ ಕಮಿಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ದ ಮಾಡಿ ಹೈಕಮಾಂಡ್‌ಗೆ ರವಾನಿಸಿದೆ.
224 ಕ್ಷೇತ್ರಗಳಲ್ಲಿ 1 ಕ್ಷೇತ್ರಕ್ಕೆ ಮೂವರಂತೆ ಅಭ್ಯರ್ಥಿಗಳ ಹೆಸರನ್ನ ಶಿಫಾರಸು ಮಾಡಿದೆ. ಇದೀಗ ಏಪ್ರಿಲ್ 8ರಂದು ಬಿಜೆಪಿ ಕೇಂದ್ರ ಚುನಾವಣಾ ಸಂಸದೀಯ ಸಭೆ ನಡೆಯಲಿದೆ. ಈ ಸಭೆಯಲ್ಲಿ ಅಭ್ಯರ್ಥಿಗಳ ಮೊದಲ ಲಿಸ್ಟ್ ಫೈನಲ್ ಆಗಲಿದ್ದು 3 ಹಂತದಲ್ಲಿ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.
ದೆಹಲಿಯಲ್ಲಿ ನಡೆಯಲಿರುವ ಬಿಜೆಪಿ ಕೇಂದ್ರ ಚುನಾವಣಾ ಸಂಸದೀಯ ಸಭೆಯಲ್ಲಿ ಭಾಗವಹಿಸಲು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಇಂದು ದೆಹಲಿಗೆ ತೆರಳಲಿದ್ದಾರೆ.
ಟಿಕೆಟ್ ರಿಲೀಸ್ ಬಗ್ಗೆ ಮಾತನಾಡಿರುವ ಸಿಎಂ ಬೊಮ್ಮಾಯಿ ಏಪ್ರಿಲ್ 9ರಂದು ಮೊದಲ ಪಟ್ಟಿ ರಿಲೀಸ್ ಆಗಲಿದೆ ಎಂದಿದ್ದಾರೆ.
ಏಪ್ರಿಲ್ 9ಕ್ಕೆ ಟಿಕೆಟ್ ರಿಲೀಸ್ :
4 ಹಂತದಲ್ಲಿ ಅಭಿಪ್ರಾಯ ಪಡೆದು ನಮ್ಮ ಅಭ್ಯರ್ಥಿಗಳ ಹೆಸರನ್ನು ನಿರ್ಧಾರ ಮಾಡುತ್ತೇವೆ. ಏಪ್ರಿಲ್ 8 ರಂದು ಪಾರ್ಲಿಮೆಂಟರಿ ಬೋರ್ಡ್ ಸಭೆ ಇದೆ ಆದರೆ, 9 ರಂದು ಘೋಷಣೆಯಾಗುತ್ತದೆ. ಎಲ್ಲಿಯೂ ಅಸಮಾಧಾನ ಇಲ್ಲ. ನಮ್ಮ ಪಕ್ಷವೇ ಗೆಲ್ಲುತ್ತಿರುವುದರಿಂದ ಪೈಪೋಟಿ ಇದೆ ಅಷ್ಟೇ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಇದನ್ನು ಓದಿ –ಸಿದ್ದು ಗೆಲುವಿಗೆ ಬಿಜೆಪಿ ಸಿದ್ದ ಸೂತ್ರ – ಎಚ್.ಡಿ.ಕುಮಾರಸ್ವಾಮಿ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು