ಕಳೆದ ವಾರ ಮಂಡ್ಯದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಮಂಡ್ಯದಲ್ಲಿ ಈಗಾಗಲೇ ಕಾಂಗ್ರೆಸ್ ಮುಕ್ತವಾಗಿದೆ, ನಾವು ಜೆಡಿಎಸ್ ಮುಕ್ತ ಮಾಡುತ್ತೇವೆ ಎಂದು ನಳಿನ್ ಕುಮಾರ್ ಕಟೀಲು ಹೇಳಿಕೆಗೆ ಮಂಡ್ಯದಲ್ಲಿ ಪ್ರತಿಕ್ರಿಯೆ ನೀಡಿದ ನಿಖಿಲ್ ಕುಮಾರಸ್ವಾಮಿ, ಮೊನ್ನೆ ಕಟೀಲ್ ಸಾಹೇಬ್ರು ಮಾತನಾಡುವ ವೇಳೆ ಬಹುತೇಕ ಎಲ್ಲ ಕುರ್ಚಿಗಳು ಖಾಲಿಯಾಗಿದ್ದವು. ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಶೇ.10ರಷ್ಟು ಮೀಸಲಾತಿ : ಸುಪ್ರೀಂ ಅಸ್ತು
ಮಂಡ್ಯದಲ್ಲಿ ಜೆಡಿಎಸ್ ಮುಕ್ತ ಮಾಡುವುದಕ್ಕೆ ಬಿಜೆಪಿಗೆ ಮಂಡ್ಯದಲ್ಲಿ ನೆಲೆಯೇ ಇಲ್ಲ. ಅದರ ಬಗ್ಗೆ ಚರ್ಚೆ ಮಾಡುವುದಕ್ಕೆ ನಾನು ಇಷ್ಟಪಡಲ್ಲ ಎಂದು ಹೇಳಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿ ಕಣ್ಣೀರಾ ನಾಯಕ ಎಂಬ ಕಟೀಲ್ ಹೇಳಿಕೆಗೆ, ಕುಮಾರಣ್ಣ ಮಂಡ್ಯಕ್ಕೆ ಬಜೆಟ್‍ನಲ್ಲಿ ಎಂಟೂಮುಕ್ಕಾಲು ಸಾವಿರ ಕೋಟಿ ಮೀಸಲಿಟ್ಟಿದ್ದರು. ಆಗ ಬಿಜೆಪಿಯವರು ಲಘುವಾಗಿ ಮಾತನಾಡಿದರು. ಮಂಡ್ಯ, ರಾಮನಗರ, ಹಾಸನಕ್ಕೆ ಸೀಮಿತವಾದ ಬಜೆಟ್ ಅಂದರು. ಬಳಿಕ ಬಿಜೆಪಿ ಸರ್ಕಾರ ಬಂದ ಮೇಲೆ ಆ ಅನುದಾನ ಏನಾಯಿತು ಅಂತ ಪ್ರಶ್ನೆ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು