December 22, 2024

Newsnap Kannada

The World at your finger tips!

BJP , election , politics

ಬಿಜೆಪಿ ಎಲ್ಲಾ ಹಗರಣಗಳ ತನಿಖೆ

Spread the love
  • ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಖಚಿತ
  • ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ
  • ಆಮ್ಲಜನಕ ಕೊರತೆ ಪ್ರಕರಣಕ್ಕೆ ಮರುಜೀವ
  • ಮಾಜಿ ಸಚಿವ ಕೆ.ಸುಧಾಕರ್ ಮೇಲೆ ತೂಗುಕತ್ತಿ

ಹಾಸನ: ಮೆಡಿಕಲ್ ಕಾಲೇಜು ನಿರ್ಮಾಣ ಅಕ್ರಮ ಸೇರಿದಂತೆ ಹಿಂದಿನ ಬಿಜೆಪಿ ಸರ್ಕಾರದ ಆಡಳಿತದಲ್ಲಿ ನಡೆದಿದೆ ಎನ್ನಲಾದ ಎಲ್ಲಾ ಹಗರಣ ಮತ್ತು ಅಕ್ರಮಗಳ ಬಗ್ಗೆ ಪ್ರತ್ಯೇಕ ತನಿಖೆ ನಡೆಸಲಾಗುವುದು. ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವುದ ಬಗ್ಗೆ ಅನುಮಾನ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಂಗಳವಾರ ಮಾತನಾಡಿದ ಅವರು, ನಾಲ್ಕು ಹೊಸ ಮೆಡಿಕಲ್ ಕಾಲೇಜುಗಳನ್ನು ನಿರ್ಮಿಸಲಾಗಿದೆ. ಅದರಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪವಿದೆ. ತನಿಖೆ ನಡೆಸುತ್ತೇವೆ. ಅಲ್ಲದೆ, ಶೇ 40ರಷ್ಟು ಕಮಿಷನ್ ಕುರಿತಾಗಿಯೂ ತನಿಖೆ ನಡೆಸುತ್ತೇವೆ. ಕೋವಿಡ್-19 ಅವಧಿಯಲ್ಲಿ ಆರೋಗ್ಯ ಪರಿಕರಗಳ ಖರೀದಿ ಅಕ್ರಮಗಳು, ನೀರಾವರಿ ಯೋಜನೆಗಳಿಗೆ ಸಂಬಂಧಿಸಿದ ಅಕ್ರಮಗಳು ಮತ್ತು ಬಿಟ್‍ಕಾಯಿನ್ ಹಗರಣ ಸೇರಿದಂತೆ ಎಲ್ಲ ಹಗರಣಗಳ ತನಿಖೆ ನಡೆಸಲಾಗುವುದು ಎಂದು ಹೇಳಿದರು.

ಪಿಎಸ್‍ಐ ನೇಮಕಾತಿ ಹಗರಣದ ತನಿಖೆ ಸಿಐಡಿಯಿಂದ ನಡೆಯುತ್ತಿದೆ. ಅದನ್ನು ಇನ್ನಷ್ಟು ಚುರುಕು ಗೊಳಿಸಲಾಗುವುದು. ಚಾಮರಾಜನಗರ ಆಸ್ಪತ್ರೆಯಲ್ಲಿ ಕೋವಿಡ್ ಸಮಯದಲ್ಲಿ ಆಮ್ಲಜನಕ ಕೊರತೆಯಿಂದ ಸಂಭವಿಸಿದ ಸಾವುಗಳ ಬಗ್ಗೆಯೂ ತನಿಖೆ ನಡೆಸಲಾಗುವುದು. ಇಬ್ಬರು ಮಾತ್ರ ಸಾವಿಗೀಡಾಗಿದ್ದಾರೆ ಎಂದು ಅಂದಿನ ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದರು. ಆದರೆ, ಆಮ್ಲಜನಕದ ಕೊರತೆಯಿಂದ ಉಂಟಾದ ಸಾವು ನೋವುಗಳು ಹೆಚ್ಚಿವೆ. ಅವರು ಸುಳ್ಳು ಹೇಳಿದ್ದಾರೆ. ಈ ಬಗ್ಗೆಯೂ ತನಿಖೆ ಖಚಿತ ಎಂದರು.ಬೆಂಗಳೂರು ನಂದೇ! ಡಿಕೆಶಿ- ಅಶ್ವತ್ಥ ವಾಗ್ವಾದ

ಚುನಾವಣಾ ಖಾತರಿಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರವನ್ನು ಟೀಕಿಸಿದ್ದ ವಿರೋಧ ಪಕ್ಷಗಳಿಗೆ ತಿರುಗೇಟು ನೀಡಿದ ಅವರು, ಸರ್ಕಾರಿ ಬಸ್‍ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸುವ ಒಂದು ಖಾತರಿಯನ್ನು ಈಗಾಗಲೇ ಜಾರಿಗೊಳಿಸಲಾಗಿದೆ. ಜುಲೈ 1ರಿಂದ ಮನೆಗಳಿಗೆ ಗೃಹ ಜ್ಯೋತಿ ಯೋಜನೆಯಡಿ 200 ಯೂನಿಟ್‍ಗಳವರೆಗೆ ಉಚಿತ ವಿದ್ಯುತ್ ನೀಡಲಾಗುವುದು. ಆಗಸ್ಟ್ 15ರ ನಂತರ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ 2,000 ರೂ. ಗಳನ್ನು ನೀಡುವ ಗೃಹ ಲಕ್ಷ್ಮೀ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದರು.

Copyright © All rights reserved Newsnap | Newsever by AF themes.
error: Content is protected !!