December 22, 2024

Newsnap Kannada

The World at your finger tips!

sumalatha

ತ. ನಾಡಿಗೆ ಮಣಿದು ಕಾವೇರಿ ನೀರು ಹರಿಸಿದ ಸರ್ಕಾರ : ಆ21 ರಂದು ರಾಷ್ಟ್ರೀಯ ಹೆದ್ದಾರಿ ತಡೆಗೆ ಬಿಜೆಪಿ ಸಿದ್ದತೆ

Spread the love

ಮಂಡ್ಯ :ರಾಜ್ಯದ ಹಿತ ಬಲಿಕೊಟ್ಟು , ರೈತರಿಗೆ ನ್ಯಾಯ ಮಾಡಿ ಕಳೆದ ಮೂರು ದಿನಗಳಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಬಿಜೆಪಿ ಆ21 ರಂದು ಮಂಡ್ಯದ ಇಂಡುವಾಳು ಬಳಿ ಬೆಂಗಳೂರು – ಮೈಸೂರು ಹೆದ್ದಾರಿ ಬಂದ್ ಪ್ರತಿಭಟಿಸಲು ಬಿಜೆಪಿ ನಿರ್ಧರಿಸಿದೆ.

ಮಂಡ್ಯದ ಬಿಜೆಪಿ ಕಚೇರಿಯಲ್ಲಿ ನಡೆದ ಐದು ಜಿಲ್ಲೆಗಳ ಬಿಜೆಪಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಮುಖಂಡರ ಸಭೆಯಲ್ಲಿ ಕಾವೇರಿ ಕಣಿವೆ ರೈತರಿಗೆ ಅನ್ಯಾಯ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ನಡೆಸಲು ನಿರ್ಧರಿಸಲಾಯಿತು.

ಕಾವೇರಿ ಕಣಿವೆಯ ರೈತರಿಗೆ ರಾಜ್ಯದ ಕಾಂಗ್ರೆಸ್ ಸರ್ಕಾರ ನಿರಂತರ ಅನ್ಯಾಯ ಮಾಡುತ್ತಿದ್ದು ಸೋಮವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರು-ಮೈಸೂರು ಹೆದ್ದಾರಿಯನ್ನು ಇಂಡವಾಳು ಮತ್ತು ಯಲಿಯೂರು ವೃತ್ತದಲ್ಲಿ ಬಂದ್ ಮಾಡಿ ಪ್ರತಿಭಟಿಸಲಾಗುವುದು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರನ್ನು ಪ್ರತಿಭಟನೆಯ ನೇತೃತ್ವ ವಹಿಸಲು ಆಹ್ವಾನಿಸಲಾಗುವುದು.ಜೊತೆಗೆ ಜಿಲ್ಲೆಯ ಜನಪರ,ರೈತ, ಕನ್ನಡಪರ ಮತ್ತು ಆಟೋ ಟ್ಯಾಕ್ಸಿ ಮಾಲೀಕರನ್ನು ಸಹ ಭಾಗವಹಿಸುವಂತೆ ಕೋರಲಾಗಿದೆ.

ಈ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವಥ್ ನಾರಾಯಣ ಗೌಡ ಕಾವೇರಿ ಕೊಳ್ಳದ ಜಲಾಶಯಗಳಿಂದ ನೀರು ಬಿಡುಗಡೆ ಮಾಡುವಂತೆ ಆದೇಶ ಇಲ್ಲದಿದ್ದರೂ ರಾಜ್ಯ ಸರ್ಕಾರ ನೀರು ಬಿಡುಗಡೆ ಮಾಡುವ ಮೂಲಕ ರೈತರಿಗೆ ದ್ರೋಹ ಮಾಡಿದೆ ಎಂದು ಹೇಳಿದರು.

ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ,ಜಲಾಶಯಗಳಲ್ಲಿ ನೀರು ಸಹ ಕಡಿಮೆ ಇದೆ, ಆದರೂ ಸಹ ಏಕಾಏಕಿ ತೀರ್ಮಾನ ಕೈಗೊಂಡು ನೀರು ಬಿಡುಗಡೆ ಮಾಡಲಾಗಿದೆ, ತಮಿಳುನಾಡಿನ ಜಲಾಶಯಗಳಲ್ಲಿ ಸಾಕಷ್ಟು ಪ್ರಮಾಣದ ನೀರು ಲಭ್ಯವಿದೆ, ಅಷ್ಟೇ ಅಲ್ಲದೆ ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್ ನ ಅಂತಿಮ ತೀರ್ಪಿನಲ್ಲಿ ಕುರುವೈ ಬೆಳೆ ಪ್ರದೇಶ 1.80 ಹೇಕ್ಟರ್ ಮೀರಿರಬಾರದು ಎಂದು ಹೇಳಿದೆ, ಆದರೆ ತಮಿಳುನಾಡಿನಲ್ಲಿ ಮೂರು ಲಕ್ಷ ಹೇಕ್ಟರ್ ಪ್ರದೇಶದಲ್ಲಿ ಕುರುವೈ ಬೆಳೆ ಬೆಳೆಯಲಾಗುತ್ತಿದೆ, ಅಲ್ಲಿನ ರೈತರ ಹಿತರಕ್ಷಣೆ ಗಾಗಿ ರಾಜ್ಯ ಸರ್ಕಾರ ನೀರು ಬಿಡುಗಡೆ ಮಾಡಿದೆ ಎಂದರು.


ಬೆಂಗಳೂರಿನಲ್ಲಿ ನಡೆದ ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟ ಸಭೆಯಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಭಾಗವಹಿಸಿದ್ದರು. ಅವರನ್ನು ಓಲೈಕೆ ಮಾಡಲು ಕಾಂಗ್ರೆಸ್ ರಾಜ್ಯ ಹಿತ ಬಲಿ ಕೊಟ್ಟಿದೆ ಅಲ್ಲದೇ ಡಿ.ಕೆ.ಶಿವಕುಮಾರ್ ಹಾಗೂ ಸ್ಟಾಲಿನ್ ನಡುವೆ ಆಗಿರುವ ಒಳ ಒಪ್ಪಂದದಂತೆ ನೀರು ಬಿಡಲಾಗಿದೆ ಎಂದು ಹೇಳಿದರು.ನೀರಿನ ವಿಷಯಕ್ಕೆ ರಾಜಕಾರಣ ಬೇಕೆ ? ಸಂಸದೆ ಸುಮಲತಾ ಪ್ರಶ್ನೆ


ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ರೈತರು ಯಾವುದೇ ಹೊಸ ಬೆಳೆ ಹಾಕಬಾರದು ಎಂದು ಕೃಷಿ ಸಚಿವರು ಹೇಳುತ್ತಾರೆ ಆದರೆ ತಮಿಳುನಾಡಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸುವ ಮೂಲಕ ರಾಜ್ಯದ ರೈತರ ಕಣ್ಣಿಗೆ ಸುಣ್ಣ ಹಾಕಿ ತಮಿಳುನಾಡು ರೈತರಿಗೆ ಬೆಣ್ಣೆ ಉಣಬಡಿಸುತ್ತಿದ್ದಾರೆ ಎಂದು ಕಿಡಿ ಕಾರಿದರು.

Copyright © All rights reserved Newsnap | Newsever by AF themes.
error: Content is protected !!