Karnataka

ಅಂದಿನ ಪರಿಸ್ಥಿತಿ ನೋಡಿಕೊಂಡು ಬಿಜೆಪಿ – ಜೆಡಿಎಸ್ ಮೈತ್ರಿ ನಿರ್ಧಾರ – ದೇವೇಗೌಡ

ಬೆಂಗಳೂರು : 2024 ರ ಲೋಕಸಬಾ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಹೋರಾಟ ನಡೆಸಲಿದೆ. ಆದರೂ ಸಹ , ಆಗಿನ ಪರಿಸ್ಥಿತಿ ಆಧಾರಿಸಿ ಪಕ್ಷ ಮುಂದೆ ನಿರ್ಧಾರವನ್ನೂ ಕೈಗೊಳ್ಳಲಿದೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಬಿಜೆಪಿ – ಜೆಡಿಎಸ್ ನಡುವಿನ ಮೈತ್ರಿ ಕುರಿತು ಅಡ್ಡಗೋಡೆ ಮೇಲೆ ಇಟ್ಟಂತೆ ಹೇಳಿದರು

ಜೆಪಿ ಭವನದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ದೇವೇಗೌಡರು .ಈ ತಿಂಗಳ ಆರಂಭದಲ್ಲಿ ನಡೆದ ವಿರೋಧ ಪಕ್ಷಗಳ ಸಭೆಗೆ ತಮ್ಮ ಉಪಸ್ಥಿತಿ ಇರಬೇಕೆಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಯಸಿದ್ದರೂ ಕರ್ನಾಟಕದ ಕಾಂಗ್ರೆಸ್‌ನ ಒಂದು ವರ್ಗ ಅಂತಹ ಕ್ರಮವನ್ನು ವಿರೋಧಿಸಿದ್ದರಿಂದ ತಮ್ಮಗೆ ಆಹ್ವಾನ ನೀಡಿರಲಿಲ್ಲ ಎಂದು ಅವರು ಹೇಳಿದರು.

ಕಳೆದ ವಾರ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿವಿಧ ವಿಷಯಗಳಲ್ಲಿ ಬಿಜೆಪಿಯೊಂದಿಗೆ ಒಟ್ಟಾಗಿ ಕೆಲಸ ಮಾಡುವುದಾಗಿ ಹೇಳುವ ಮೂಲಕ ಮುಂದಿನ ವರ್ಷದ ಚುನಾವಣೆಗೆ ಎರಡು ಪಕ್ಷಗಳು ಕೈಜೋಡಿಸುತ್ತವೆ ಎಂಬ ಊಹಾಪೋಹಗಳಿಗೆ ರೆಕ್ಕೆಪುಕ್ಕ ನೀಡಿದ್ದರು. ಆದರೆ ದೇವೇಗೌಡರು, ಅಂತಹ ಊಹಾಪೋಹಗಳನ್ನು ತಳ್ಳಿಹಾಕಿದರು.

ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಪಕ್ಷ ಐದು, ಆರು, ಮೂರು, ಎರಡು ಅಥವಾ ಒಂದು ಸ್ಥಾನಗಳನ್ನು ಗೆದ್ದರೂ, ನಾವು ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಹೋರಾಡುತ್ತೇವೆ. ಪಕ್ಷದ ಕಾರ್ಯಕರ್ತರೊಂದಿಗೆ ಸಮಾಲೋಚಿಸಿದ ನಂತರ ಪ್ರಬಲವಾಗಿರುವ ಸ್ಥಳಗಳಲ್ಲಿ ಮಾತ್ರ ನಾವು ಅಭ್ಯರ್ಥಿಗಳನ್ನು ನಿಲ್ಲಿಸುತ್ತೇವೆ. ಆದಾಗ್ಯೂ, ಪರಿಸ್ಥಿತಿಯನ್ನು ಆಧರಿಸಿ ಪಕ್ಷವು ತನ್ನ ಮುಂದಿನ ಕ್ರಮವನ್ನು ನಿರ್ಧರಿಸುತ್ತದೆ ಎಂದು ಅವರು ತಿಳಿಸಿದರು.

ಜುಲೈ 17 ರಂದು ಬೆಂಗಳೂರಿನಲ್ಲಿ ನಡೆದ ವಿರೋಧ ಪಕ್ಷಗಳು ತಮ್ಮನ್ನು ಏಕೆ ಆಹ್ವಾನಿಸಲಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ದೇವೇಗೌಡರು, ದೇವೇಗೌಡರನ್ನು ಆಹ್ವಾನಿಸಿದರೆ ಕಾಂಗ್ರೆಸ್‌ನ ಒಂದು ವರ್ಗ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಬೆದರಿಕೆ ಹಾಕಿತ್ತು. ಹೀಗಾಗಿ ನನ್ನನ್ನು ಕರೆಯಲಿಲ್ಲ. ನಿತೀಶ್ ಕುಮಾರ್ ಅವರನ್ನು ಆಹ್ವಾನಿಸಲು ಬಯಸಿದ್ದರು ಆದರೆ ಕೆಲವು ಸ್ಥಳೀಯ ಕಾಂಗ್ರೆಸ್ ನಾಯಕರು ತಮ್ಮ ಪರವಾಗಿರಲಿಲ್ಲ ಎಂದರು.

224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ ತಿಂಗಳಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್‌ ಕಳಪೆ ಪ್ರದರ್ಶನ ನೀಡಿ ಕೇವಲ 19 ಸ್ಥಾನಗಳನ್ನು ಗಳಿಸಿತ್ತು. 1983ರಿಂದ ಇಂದಿನವರೆಗೂ ಪಕ್ಷ ಅಸ್ತಿತ್ವದಲ್ಲಿದೆ ಮತ್ತು ಮುಂದೆಯೂ ಇರುತ್ತದೆ.

ಪಕ್ಷ ಮುಗಿಯುತ್ತದೆ ಎಂದುಕೊಂಡವರು ಭ್ರಮೆಯಲ್ಲಿ ಬದುಕುತ್ತಿದ್ದಾರೆ. ಅದು ಸಾಧ್ಯವಿಲ್ಲ ಎಂದು ಗೌಡರು ಹೇಳಿದರು.KRS ನಲ್ಲಿ 100 ಅಡಿಗೆ ತಲುಪಿದ ನೀರು : 50 ಸಾವಿರ ಕ್ಯುಸೆಕ್ ಒಳಹರಿವು – ಕಬಿನಿ ಭರ್ತಿಗೆ 4 ಅಡಿ ಬಾಕಿ

ಗೌಡರ ಪ್ರಕಾರ, 19 ಶಾಸಕರು, ಏಳು ಎಂಎಲ್‌ಸಿಗಳು ಮತ್ತು ಉನ್ನತ ನಾಯಕರು ಕಳೆದ ವಾರ ಸಭೆ ನಡೆಸಿ ಜಿಲ್ಲೆಗಳಲ್ಲಿ ಪ್ರಚಾರಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿದ್ದು, ಕುಮಾರಸ್ವಾಮಿ ವಿದೇಶದಿಂದ ಮರಳಿದ ನಂತರ ದಿನಾಂಕ ಅಂತಿಮಗೊಳಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

Team Newsnap
Leave a Comment

Recent Posts

ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ

ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More

May 14, 2024

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024

ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More

May 13, 2024