ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಹೊಂದಾಣಿಕೆ ವಿಚಾರವನ್ನು ಕುಮಾರಸ್ವಾಮಿ, ಯಡಿಯೂರಪ್ಪನವರೇ ತೀರ್ಮಾನ ಮಾಡುತ್ತಾರೆ
ಇದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಸ್ಪಷ್ಟ ನುಡಿ
ನವದೆಹಲಿಯಲ್ಲಿ
ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಗೌಡರು, ಪರಿಷತ್ ಚುನಾವಣೆಯ ಬಗ್ಗೆ ಮೋದಿಯವರ ಬಳಿ ಚರ್ಚೆ ಮಾಡಿದ್ದೇನೆ. ಗೊಂದಲವಾಗದಂತೆ ನಿರ್ಧಾರ ಮಾಡಿ ಎಂದು ಹೇಳಿದ್ದೇನೆ. ಬಿಜೆಪಿಯವರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಕಾದು ನೋಡೋಣ ಎಂದರು.
ಮುಂದಿನ ಚುನಾವಣೆಗೆ ಇದೆ ಮೈತ್ರಿ ಮುಂದುವರಿಯುವ ಬಗ್ಗೆ ಚರ್ಚೆ ನಡೆದಿಲ್ಲ. ಮಲ್ಲಿಕಾರ್ಜುನ ಖರ್ಗೆಯವರಿಗೆ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬ ಮನಸ್ಸು ಇದೆ. ಆದರೆ ಈ ಮನಸ್ಸು ಬೇರೆ ನಾಯಕರಿಗೆ ಇಲ್ಲ. ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಏನಿದೆಯೋ ಗೊತ್ತಿಲ್ಲ ಎಂದು ಪ್ರತಿಕ್ರಿಯಿಸಿದರು.
ನಾವು ಮೇಲೆ ಬಿದ್ದು ಮೈತ್ರಿ ಮಾಡಿಕೊಳ್ಳಿ ಎಂದು ಹೇಳಲು ಆಗಲ್ಲ. ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡುವ ಬಗ್ಗೆ ಕುಮಾರಸ್ವಾಮಿ ನಿರ್ಧಾರ ಮಾಡುತ್ತಾರೆ ಎಂದು ಹೇಳಿದರು.
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
More Stories
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ