ರಾಜ್ಯದಲ್ಲಿ ಈಗ ಬಿಜೆಪಿ ಮತ್ತು ಜೆಡಿಎಸ್ ದೋಸ್ತಿ ಮತ್ತಷ್ಟು ಗಟ್ಟಿಯಾಗುತ್ತಾ ಹೋಗುತ್ತಿದೆ.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹುಟ್ಟು ಹಬ್ಬದ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಯಡಿಯೂರಪ್ಪ ಅವರುಗಳು ಶುಭಾಷಯಗಳನ್ನು ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ಆಯುಷ್ಯ ಕೊಟ್ಟು ಆಶೀರ್ವದಿಸಲಿ ಎಂದು ಹಾರೈಸಿದ್ದಾರೆ.
ಪ್ರಧಾನಿಯವರ ಶುಭ ಹಾರೈಕೆಗೆ ಪ್ರತಿಕ್ರಿಯಿಸಿರುವ ಹೆಚ್ಡಿಕೆ, ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಜನ್ಮ ದಿನದ ಹಾರ್ದಿಕ ಶುಭಾಶಯಗಳು. ದೇವರ ಆಶೀರ್ವಾದ ಸದಾ ನಿಮ್ಮ ಮೇಲೆ ಇರಲಿ ಎಂದು ಹಾರೈಸುತ್ತೇನೆ ಅಂತಾ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
- ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
More Stories
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ