ಬಿಜೆಪಿ – ಜೆಡಿಎಸ್ ಬಾಂಧವ್ಯ ಗಟ್ಟಿ:ಎಚ್ ಡಿಕೆ ಹುಟ್ಟು ಹಬ್ಬಕ್ಕೆ ಪಿಎಂ, ಸಿಎಂ ಶುಭ ಹಾರೈಕೆ

Team Newsnap
1 Min Read

ರಾಜ್ಯದಲ್ಲಿ ಈಗ ಬಿಜೆಪಿ ಮತ್ತು ಜೆಡಿಎಸ್ ದೋಸ್ತಿ‌‌ ಮತ್ತಷ್ಟು ಗಟ್ಟಿಯಾಗುತ್ತಾ ಹೋಗುತ್ತಿದೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹುಟ್ಟು ಹಬ್ಬದ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಯಡಿಯೂರಪ್ಪ ಅವರುಗಳು ಶುಭಾಷಯಗಳನ್ನು ಕೋರಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ಆಯುಷ್ಯ ಕೊಟ್ಟು ಆಶೀರ್ವದಿಸಲಿ ಎಂದು ಹಾರೈಸಿದ್ದಾರೆ.

ಪ್ರಧಾನಿಯವರ ಶುಭ ಹಾರೈಕೆಗೆ ಪ್ರತಿಕ್ರಿಯಿಸಿರುವ ಹೆಚ್​ಡಿಕೆ, ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ravinda sri

ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಜನ್ಮ ದಿನದ ಹಾರ್ದಿಕ ಶುಭಾಶಯಗಳು. ದೇವರ ಆಶೀರ್ವಾದ ಸದಾ ನಿಮ್ಮ ಮೇಲೆ ಇರಲಿ ಎಂದು ಹಾರೈಸುತ್ತೇನೆ ಅಂತಾ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

Share This Article
Leave a comment