ಬಿಜೆಪಿ ನಾಯಕ ಜೀತು ಚೌಧರಿ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆಗೈದಿರುವ ಘಟನೆ ಕಳೆದ ರಾತ್ರಿ ದೆಹಲಿಯ ಮಯೂರ್ ವಿಹಾರ್ ಪ್ರದೇಶದಲ್ಲಿ ಜರುಗಿದೆ.
ಬಿಜೆಪಿ ನಾಯಕನ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದಾರೆ. ನಂತರ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಸಾವನ್ನಪ್ಪಿದ್ದಾರೆ.
ರಾತ್ರಿ ಗಸ್ತಿನಲ್ಲಿದ್ದ ಪೋಲಿಸರು ದೆಹಲಿಯ ಮಯೂರ್ ವಿಹಾರ್-III, ಪಾಕೆಟ್ ಸಿ -1 ಬಳಿ ಜನರ ಸೇರಿರುವುದನ್ನು ಕಂಡು ಗುಂಪಿನಲ್ಲಿ ಒಬ್ಬ ವ್ಯಕ್ತಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ನೋಡಿದ್ದಾರೆ , ಪರಿಶೀಲನೆ ನಡೆಸಿದಾಗ ಅದು ಜಿತೇಂದರ್ ಅಕಾ ಜೀತು ಚೌಧರಿ ಎಂದು ತಿಳಿದುಬಂದಿದೆ.
ನಂತರ ಗುಂಡೇಟಿನಿಂದ ಒದ್ದಾಡುತ್ತಿದ್ದ ಅವರನ್ನು ಖಾಸಗಿ ವಾಹನದಲ್ಲಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ನಡೆದ ಸ್ಥಳವನ್ನು ಪರಿಶೀಲಿಸಿದ ಪೊಲೀಸರು ಸ್ಥಳದಿಂದ ಕೆಲವು ಖಾಲಿ ಕಾಟ್ರಿಡ್ಜ್‍ಗಳು ಮತ್ತು ಇತರೆ ಪುರಾವೆಗಳನ್ನು ವಶಪಡಿಸಿಕೊಂಡಿದ್ದಾರೆ. ಸದ್ಯ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ವಶಪಡಿಸಿಕೊಂಡಿದ್ದಾರೆ ಆರೋಪಿಗಳಿಗಾಗಿ ಪರಿಶೀಲನೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ