ಕರಾವಳಿ ಪ್ರದೇಶದಲ್ಲಿ ಬಿಜೆಪಿ ಯುವ ಮುಖಂಡ ಸುಳ್ಯದ ಪ್ರವೀಣ್ ನೆಟ್ಟಾರು ಅವರನ್ನು ಕಳೆದ ರಾತ್ರಿ ಬರ್ಬರವಾಗಿ ಕೊಲೆ ಮಾಡಲಾಗಿದೆ.
ಬೆಳ್ಳಾರೆ ಪೇಟೆಯಲ್ಲಿ ನಿಂತಿದ್ದಾಗ ಕೇರಳದಲ್ಲಿ ರಿಜಿಸ್ಟರ್ ಬೈಕ್ ಮೇಲೆ ಬಂದ ಅಪರಿಚಿತ ದುಷ್ಕರ್ಮಿಗಳಿಬ್ಬರು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಈ ಹತ್ಯೆಗೈದಿದ್ದಾರೆ.
ಪ್ರವೀಣ್ ದಾಳಿಗೆ ಒಳಗಾದ ಕೂಡಲೇ ಅವರನ್ನು ಪುತ್ತೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಯಿತು. ಈಗ ಚಿಕಿತ್ಸೆ ಫಲಿಸದೇ ಪ್ರವೀಣ್ ಸಾವನ್ನಪ್ಪಿದ್ದಾರೆ. ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಸುಳ್ಯ, ಪುತ್ತೂರು, ಬೆಳ್ಳಾರೆಯಲ್ಲಿ ಉದ್ವಿಗ್ನ ಪರಿಸ್ಥಿತಿ :
ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆಯಾಗ್ತಿದಂತೆ ಬಿಗಿವಿನ ವಾತವರಣ ನಿರ್ಮಾಣಗೊಂಡಿತ್ತು. ಪ್ರವೀಣ್ ಹತ್ಯೆ ಖಂಡಿಸಿ ಪುತ್ತೂರು ಖಾಸಗಿ ಆಸ್ಪತ್ರೆ ಬಳಿ ಬಿಜೆಪಿ ಕಾರ್ಯಕರ್ತರು ಜಮಾಸಿದ್ರು. ಅಲ್ಲದೇ ಹತ್ಯೆಯನ್ನ ಖಂಡಿಸಿ ಪ್ರತಿಭಟನೆಯನ್ನೂ ನಡೆಸಿದರು.
ಮಕ್ಕಳು 1 ನೇ ತರಗತಿಗೆ ಸೇರಲು 6 ವರ್ಷ ತುಂಬಲೇಬೇಕು – ಸರ್ಕಾರದ ಆದೇಶ
ಈ ಹಿನ್ನೆಲೆ ಆಸ್ಪತ್ರೆ ಬಳಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಸದ್ಯ ಸುಳ್ಯ, ಪುತ್ತೂರು, ಬೆಳ್ಳಾರೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದ್ದು ಎಲ್ಲಡೆ ಕಟ್ಟೆಚ್ಚರ ವಹಿಸಲಾಗಿದೆ.
ಕೊಲೆ ಪ್ರಕರಣ ದಾಖಲಿಸಿಕೊಂಡಿರೋ ಪೊಲಿಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಕೇರಳ ಗಡಿ ಪ್ರದೇಶ, ಪುತ್ತೂರಿನ ಸುತ್ತ ನಾಕಾಬಂದಿ ಹಾಕಿ ಕೊಲೆ ಆರೋಪಿಗಳ ಪತ್ತೆಗೆ ಪೋಲಿಸರು ಮುಂದಾಗಿದ್ದಾರೆ.
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ