ನನಗೆ ಬಿಜೆಪಿ ನಾಯಕರು ಅವಮಾನ ಮಾಡಿದ್ದಾರೆ. ಅದನ್ನು ಅನುಭವಿಸಿದ್ದಾರೆ. ಹೀಗಾಗಿ ನನ್ನ ಕ್ಷೇತ್ರದ ಮತದಾರರು ಯಾವ ಪಕ್ಷಕ್ಕೆ ಹೋಗಿ ಎನ್ನುವರೋ ಅಲ್ಲಿಗೆ ಹೋಗುತ್ತೇನೆ ಎಂದು ಎ.ಮಂಜು ನಾಯಕರು ಹೇಳಿದರು.
ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಹಾಸನದಲ್ಲಿ ನನ್ನ ಮಗನಿಗೆ ಟಿಕೆಟ್ ಕೊಡಿ ಎಂದು ನಾವು ಕೇಳಿರಲಿಲ್ಲ. ಆದರೆ ಬಿಜೆಪಿ ಅವರೇ ಬಂದು ಮಂಥರ್ ಗೌಡಗೆ ಟಿಕೆಟ್ ನೀಡುವ ವಿಚಾರ ಮಾತನಾಡಿದ್ದರು. ಜೊತೆಗೆ ನಾನು ಐದು ಕೋಟಿ ರೂ. ಬಂಡವಾಳ ಹಾಕುತ್ತೇನೆ ಎಂದು ಹಾಸನದ ಶಾಸಕರು ಪಾರ್ಟಿ ಮೀಟಿಂಗ್‌ನಲ್ಲಿ ಹೇಳಿದ್ದರು ಎಂದರು.
ಈ ಮಾತುಕತೆಯ ಬಳಿಕ ಶಾಸಕ ಪ್ರೀತಂ ಗೌಡ ಹಾಗೂ ಅವರ ಬೆಂಬಲಿಗರು ನಂತರದಲ್ಲಿ ಕ್ವಾಲಿಟಿ ಬಾರ್ ಶರತ್ ಅವರನ್ನು ಮಂಥರ್ ಬಳಿ ಕಳುಹಿಸಿ, ಚುನಾವಣೆಗೆ ನಿಲ್ಲಬಾರದು ಎಂದು ಹೇಳಿಸಿದ್ದಾರೆ. ನಂತರ ಕಾಂಗ್ರೆಸ್ ನಾಯಕರು ಮಂಥರ್ ಗೌಡನನ್ನು ಗುರುತಿಸಿ ಕೊಡಗಿನಲ್ಲಿ ಟಿಕೆಟ್ ನೀಡಿದ್ದಾರೆ ಎಂದು ತಿಳಿಸಿದರು.
ಒಳ ಒಪ್ಪಂದ ಮಾಡಿಕೊಳ್ಳುವ ಪ್ರವೃತ್ತಿ ಹಾಸನದ ಕೆಲವು ನಾಯಕರಲ್ಲಿ ಇದೆ. ಮತದಾರರ ಮನವೊಲಿಸುವಲ್ಲಿ ಮುಖಂಡರು ವಿಫಲರಾಗಿದ್ದಾರೆ. ಅವರವರ ಸ್ವಾರ್ಥಕ್ಕೆ, ಸ್ವಹಿತಾಸಕ್ತಿಗೆ ಪಕ್ಷ ಬಲಿ ಕೊಟ್ಟಿದ್ದಾರೆ ಎಂದು ಪರೋಕ್ಷವಾಗಿ ಶಾಸಕರ ವಿರುದ್ಧ ಹರಿಹಾಯದ್ದರು.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಬುದ್ಧಿಮಾಂದ್ಯ ಬಾಲಕಿಗೆ ಪಕ್ಕದ ಮನೆಯವನಿಂದಲೇ ಅತ್ಯಾಚಾರ – ಆರೋಪಿ ಪರಾರಿ
ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್