December 23, 2024

Newsnap Kannada

The World at your finger tips!

election,BJP,Politics

BJP ticket announcement - High command shock to Vijayendra

ಸಂಜೆ 7 ಗಂಟೆಗೆ ಬಿಜೆಪಿ ಶಾಸಕಾಂಗ ಸಭೆ – ಇಂದೇ ಹೊಸ ಮುಖ್ಯ ಮಂತ್ರಿ ಘೋಷಣೆ ಸಾಧ್ಯತೆ ?

Spread the love

ಯಡಿಯೂರಪ್ಪ ರಾಜೀನಾಮೆ ಯಿಂದ ತೆರವುಗೊಂಡಿರುವ ಮುಖ್ಯಮಂತ್ರಿ ಹುದ್ದೆಗೆ ಹೊಸಬರನ್ನು ನೇಮಿಸುವ ಕುರಿತು ಇಂದೇ ಅಂತಿಮ ತೀರ್ಮಾನ ಹೊರಬೀಳುವ ಸಾಧ್ಯತೆ.

ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್ ನಲ್ಲಿ ಇಂದು ಸಂಜೆ 7 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ.

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಡಿ.ಕೆ.ಅರುಣ, ಕೇಂದ್ರೀಯ ವೀಕ್ಷಕ ಕಿಶನ್ ರೆಡ್ಡಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಈ ಸಭೆಯಲ್ಲಿ ಪಕ್ಷದ ಮುಖಂಡರು ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದ್ದು, ರಾತ್ರಿಯ ಒಳಗೆ ನಿರ್ಧಾರ ಹೊರಬೀಳುವ ನಿರೀಕ್ಷೆ ಇದೆ.

ರಾಜ್ಯ ಬಿಜೆಪಿ ಕಚೇರಿಯಿಂದಲೇ ಶಾಸಕಾಂಗ ಸಭೆ ಬಗ್ಗೆ ಸೂಚನೆ ನೀಡಲಾಗಿದೆ. ಸಭೆಗೆ ಹಾಜರಾಗಲು ಬಿಜೆಪಿ ಶಾಸಕರಿಗೆ ತಿಳಿಸಲಾಗಿದೆ.

ಯಡಿಯೂರಪ್ಪ ಸೇರಿದಂತೆ 119 ಬಿಜೆಪಿ ಶಾಸಕರಿಗೂ ಸಂಜೆ 7 ಗಂಟೆಗೆ ಶಾಸಕಾಂಗ ಸಭೆಗೆ ಹಾಜರಾಗಲು ಮಾಹಿತಿ ನೀಡಲಾಗಿದೆ, ಉಸ್ತುವಾರಿ ಸಿಎಂ ಯಡಿಯೂರಪ್ಪ ನಡೆ ಬಗ್ಗೆಯೂ ಕುತೂಹಲ ಮೂಡಿದೆ.

Copyright © All rights reserved Newsnap | Newsever by AF themes.
error: Content is protected !!