ಬಿಜೆಪಿ. ನಾಯಕ ಮಾಳವಿಯ ಪರ ಸಂಸದ ತೇಜಸ್ವಿ ಸೂರ್ಯ ವಾದ

Team Newsnap
1 Min Read

ರಾಹುಲ್ ಗಾಂಧಿ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಪಕ್ಷದ ಸಂಸದ, ವಕೀಲ ತೇಜಸ್ವಿ ಸೂರ್ಯ ಅವರು ಕರ್ನಾಟಕ ಹೈಕೋರ್ಟ್​​ನಲ್ಲಿ ಬುಧವಾರ ವಿಚಾರಣೆಗೆ ಹಾಜರಾದರು.

ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ವಿಚಾರಣೆ ನಡೆಸಿದ್ದು, ತೇಜಸ್ವಿ ಸೂರ್ಯ ವಾದ ಮಂಡಿಸಿದರು.ದೇಶದ ಜನರ ವರ್ಗಗಳ ನಡುವೆ ದ್ವೇಷವನ್ನು ಉತ್ತೇಜಿಸುವಂಥ ಟ್ವೀಟ್​​ ಅನ್ನು ಮಾಳವೀಯ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಮಾಳವಿಯ ಅವರು ಜೂ. 17 ರಂದು ತಮ್ಮ ವೈಯಕ್ತಿಕ ಟ್ವಿಟರ್ ಹ್ಯಾಂಡಲ್‌ನಲ್ಲಿ ರಾಹುಲ್ ಗಾಂಧಿಯವರ ವೀಡಿಯೊವೊಂದನ್ನು ಟ್ವೀಟ್ ಮಾಡಿದ್ದರು.

ಕೋಮು ಸೌಹಾರ್ದತೆ ಮತ್ತು ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಉದ್ದೇಶದಿಂದ ರಾಹುಲ್ ಗಾಂಧಿ ಅವರ ಕುರಿತಾದ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ ಎಂದು ಆರೋಪಿಸಿ, ಕಾಂಗ್ರೆಸ್ ನಾಯಕ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರು ದೂರು ದಾಖಲಿಸಿದ್ದರು.

ಮಾಳವಿಯಾ ವಿರುದ್ಧ ಆರೋಪಿಸಲಾದ ಅಂಶಗಳು ಭಾರತೀಯ ದಂಡಸಂಹಿತೆಯ 153(A) 505(2) ರ ಅಡಿ ಪ್ರಕರಣ ದಾಖಲಿಸಿಕೊಳ್ಳುವ ವ್ಯಾಪ್ತಿಗೆ ಬರುವುದಿಲ್ಲ ಎಂದು ಕೋರ್ಟ್ ಪರಿಗಣಿಸಿದೆ.

ಇದರ ಅನ್ವಯ ಸೆಕ್ಷನ್ 153 ಎ ಅಡಿಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು ಎಂದು ತಿಳಿದು ಬಂದಿದೆ.

Share This Article
Leave a comment