ನವದೆಹಲಿಯಲ್ಲಿ ಆರಂಭವಾದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ : ಪುನೀತ್ , ಉದಾಸಿಗೆ ಸಂತಾಪ

Team Newsnap
1 Min Read

ಕೊರೋನಾ ಕಾರಣದಿಂದಾಗಿ
ಬಹುತೇಕ ಎರಡು ವರ್ಷಗಳ ನಂತರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ದೆಹಲಿಯಲ್ಲಿ ಭಾನುವಾರ ಆರಂಭವಾಗಿದೆ

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಹಲವು ಪ್ರಮುಖ ನಾಯಕರು ಭಾಗಿಯಾಗಿದ್ದ ಈ ಸಭೆಯಲ್ಲಿ ನಟ ಪುನೀತ್ ಹಾಗೂ ಸಿ ಎಂ ಉದಾಸಿ ಅವರಿಗೂ ಸಂತಾಪ ಸೂಚಿಸಲಾಯಿತು

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ನರೇಂದ್ರ ಮೋದಿ ಅವರಿಗೆ ಹೂವಿನ ಹಾರ ಹಾಕಿ ಸ್ವಾಗತಿಸಲಾಯಿತು.

ಮೋದಿ ಮತ್ತು ಜೆ.ಪಿ.ನಡ್ಡಾ ಪಕ್ಷದ ಸಂಘಟನೆ ಕುರಿತು ಮಾತನಾಡಿದರು. ಪಂಜಾಬ್, ಉತ್ತರಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆ ಕುರಿತು ಈ ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸುವ ಸಾಧ್ಯತೆ ಇದೆ. ಜೊತೆಗೆ ದೇಶದಲ್ಲಿ ನಡೆದಂತಹ ಉಪಚುನಾವಣೆಯ ಸೋಲಿನ ಕುರಿತು ಅವಲೋಕನ ನಡೆಯಲಿದೆ ಎಂದು ವರದಿಯಾಗಿದೆ.

ರಾಷ್ಟ್ರೀಯ ಕಾರ್ಯಕಾರಣಿಯ ಪ್ರತಿ 3 ತಿಂಗಳಿಗೊಮ್ಮೆ ನಡೆಯಬೇಕು. ಆದರೆ, ದೇಶದಲ್ಲಿ ಕೊರೊನಾದಿಂದಾಗಿ ಕಾರ್ಯಕಾರಣಿ ಸಭೆ ನಡೆದಿರಲಿಲ್ಲ. ಇದೀಗ ಬಹುತೇಕ ಎರಡು ವರ್ಷಗಳ ನಂತರ ಈ ಸಭೆ ನಡೆಯುತ್ತಿದೆ. ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಕೇಂದ್ರದ ಸಚಿವರು, ಕಾರ್ಯಕಾರಣಿ ಸದಸ್ಯರು, ಪ್ರಮುಖ ಮುಖಂಡರು, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ.

Share This Article
Leave a comment