ಹಳೇ ಮೈಸೂರು ಪ್ರಾಂತದಲ್ಲಿ ಬಿಜೆಪಿ ಪರ್ವ ಆರಂಭ – ಸಿಎಂ ಬೊಮ್ಮಾಯಿ

Team Newsnap
4 Min Read
BJP Parva begins in Old Mysore Province - CM Bommai ಹಳೇ ಮೈಸೂರು ಪ್ರಾಂತದಲ್ಲಿ ಬಿಜೆಪಿ ಪರ್ವ ಆರಂಭ - ಸಿಎಂ ಬೊಮ್ಮಾಯಿ

ಹಳೇ ಮೈಸೂರು ಪ್ರಾಂತ್ಯದಲ್ಲಿ ಬಿಜೆಪಿ ಪರ್ವ ಆರಂಭವಾಗಿದೆ. ಮಂಡ್ಯ ಸೇರಿದಂತೆ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಪ್ರಬಲವಾಗಿ ಬೆಳೆದಿದೆ ಮಂಡ್ಯ ಜಿಲ್ಲೆಯಲ್ಲಿ ಮೇಲುಕೋಟೆ ವಿಧಾನಸಭಾ ಕ್ಷೇತ್ರ ಸೇರಿದಂತೆ ಸಹ ನಾಲ್ಕೈದು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತವಾಗಿದೆ. ಎಂದು ಸಿಎಂ ಬೊಮ್ಮಾಯಿ ವಿಶ್ವಾಸದಿಂದ ಹೇಳಿದರು

ಪಾಂಡವಪುರದ ಪಾಂಡವ ಕ್ರೀಡಾಂಗಣದಲ್ಲಿ ಜನ ಸಂಕಲ್ಪ ಯಾತ್ರೆ ಸಮಾವೇಶ ಉದ್ಘಾಟಿಸಿ. ಮಾತನಾಡಿದ ಸಿಎಂ ಬೊಮ್ಮಾಯಿ, ಮೇಲುಕೋಟೆ ಕ್ಷೇತ್ರದಲ್ಲಿ ಬಿಜೆಪಿ ಮುಖಂಡ ಡಾ.ಇಂದ್ರೇಶ್ ಉತ್ತಮ ರೀತಿಯಲ್ಲಿ ಪಕ್ಷ ಸಂಘಟನೆ ಮಾಡುವ ಕೆಲಸ ಮಾಡುತ್ತಿದ್ದಾರೆ. 2023ಕ್ಕೆ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವ ಬದಲಾವಣೆಯ ಬಿರುಗಾಳಿ ಮಂಡ್ಯ ಜಿಲ್ಲೆಯಿಂದಲೇ ಆರಂಭಗೊಳ್ಳಲಿ ಎಂದು ಕರೆ ನೀಡಿದರು.

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಡಬಲ್ ಎಂಜಿನ್ ಬಿಜೆಪಿ ಸರಕಾರ ಜನಪರ, ರೈತಪರ, ಮಹಿಳೆಯರ, ಯುವಕರ ಪರವಾಗಿ ಯಶಸ್ವಿ ಆಡಳಿತ ನಡೆಸುವ ಮೂಲಕ ದುಡಿಯುವ ವರ್ಗಕ್ಕೆ ಶಕ್ತಿತುಂಬುವ ಕೆಲಸ ಮಾಡುತ್ತಿದ್ದೇವೆ. ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ದಿಯ ಕನಸು ಹೊತ್ತು ಕೆಲಸ ಮಾಡುತ್ತಿದ್ದೇವೆ. ರಾಜ್ಯದ 45 ಸಾವಿರ ನೇತಾರರಿಗೆ ತಲಾ 5 ಸಾವಿರ ಹಣ ಹಾಕುವ ಕಾರ್ಯಕ್ರಮಕ್ಕೆ ಈಗಷ್ಟೆ ಚಾಲನೆ ನೀಡಿಬಂದಿದ್ದೇನೆ. ಯುವಕರು, ಮಹಿಳಾ ಸಬಲೀಕರಣಕ್ಕೆ 5 ಲಕ್ಷದ ವರೆಗೆ ಸಾಲದಸೌಲಭ್ಯ ನೀಡುತ್ತಿದ್ದೇವೆ, ಕಿಸಾನ್ ಸನ್ಮಾನ್ ಯೋಜನೆಯಿಂದ ರೈತರ ಖಾತೆಗೆ 10 ಸಾವಿರ ಹಣ ನೀಡುತ್ತಿದ್ದೆವೆ ಎಂದರು.

ಮೇಲುಕೋಟೆ ಕ್ಷೇತ್ರದಲ್ಲಿ ಕುರುಬ ಹಾಗೂ ವೀರಶೈವಲಿಂಗಾಯತರ ಸಮುದಾಯ ಭವನ ನಿರ್ಮಾಣ ಮಾಡುವಂತೆ ಇಂದ್ರೇಶ್ ಅವರು ನೀಡಿರುವ ಮನವಿಯನ್ನು ಪರಿಗಣಿಸಿ, ಜಿಲ್ಲಾಧಿಕಾರಿಗಳ ಮೂಲಕ ವರದಿ ತರಿಸಿಕೊಂಡು ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.

ಮಂಡ್ಯ ಜಿಲ್ಲೆಯಲ್ಲಿ ಸ್ಥಗಿತಗೊಂಡಿದ್ದ ಪಿಎಸ್‍ಎಸ್‍ಕೆ ಹಾಗೂ ಮೈಶುಗರ್ ಸಕ್ಕರೆ ಕಾರ್ಖಾನೆ ಆರಂಭಿಸಿದ್ದೇವೆ ಬಿಜೆಪಿ ಸರ್ಕಾರ, ಕಾರ್ಖಾನೆ ಆರಂಭಿಸುವಂತೆ ರೈತರು ಚಳವಳಿ ನಡೆಸಿದರು ಯಾವ ಸರಕಾರಗಳು ಕ್ರಮವಹಿಸಲ್ಲ. ಮೈಶುಗರ್ ಕಾರ್ಖಾನೆಯನ್ನು ಸರಕಾರಿ ಸ್ವಾಮ್ಯದಲ್ಲಿಯೇ ಆರಂಭಿಸಿ ಕಬ್ಬಿನ ಪೇಮೆಂಟ್‍ನ್ನು ಮೊದಲ 17 ಕೋಟಿ, ಇದೀಗ 4 ಕೋಟಿ ಹಣ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಮೈಶುಗರ್ ಕಾರ್ಖಾನೆಯಲ್ಲಿ ಯಥನಾಲ್ ಘಟಕ ಆರಂಭಿಸುವ ಮೂಲಕ ಶಾಶ್ವತವಾಗಿ ಕಾರ್ಖಾನೆ ಈ ಭಾಗದ ರೈತರ ಕಬ್ಬು ನುರಿಸುವಾಗಿ ಮಾಡಲಾಗುವುದು.

ಕೆಆರ್‍ಎಸ್ ಅಣೆಕಟ್ಟೆ 16 ಗೇಟ್‍ಗಳನ್ನು ದುರಸ್ಥಿಪಡಿಸಿದ್ದೇವೆ ಮುಂದಿನ ದಿನಗಳಲ್ಲಿ ಕೆಆರ್‍ಎಸ್‍ನ ಎಲ್ಲಾ ಗೇಟ್ ದುರಸ್ಥಿಪಡಿಸಲಾಗುವುದು. ಜಿಲ್ಲೆಯ ಕೊನೆಭಾಗದ ರೈತರಿಗೆ ನೀರೊದಗಿಸುವುದಕ್ಕಾಗಿ ವಿಸಿ ನಾಲೆ ಆಧುನೀಕರಣಕ್ಕೂ ಅನುದಾನ ನೀಡಲಾಗಿದೆ, ಜಿಲ್ಲೆಯಲ್ಲಿ 184 ಕೆರೆ ತುಂಬಿಸುವ 450 ಕೋಟಿ ವೆಚ್ಚದ ಯೋಜನೆ ಮಂಜೂರು ಮಾಡಲಾಗುತ್ತಿದೆ. ಹೀಗೆ ನಮ್ಮ ಸರಕಾರ ಜನಪರ, ರೈತಪರವಾಗಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷ ಈ ಭಾರಿ ರಾಜ್ಯದಲ್ಲಿ ಹಣ, ಹೆಂಡ, ತೋಳ್‍ಬಲ, ಅಧಿಕಾರ ವಿಷಬೀಜಬಿತ್ತಿ ಚುನಾವಣೆ ಗೆದ್ದು ಅಧಿಕಾರ ಹಿಡಿಯುವ ಭ್ರಮೆಯಲ್ಲಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರಕಾರ ಗುಜರಾತ್ ಮಾದರಿ ಸ್ಪಷ್ಟ ಬಹುಮತಪಡೆದು ಮತ್ತೊಮೆ ಬಿಜೆಪಿ ಅಧಿಕಾರಹಿಡಿಯಲಿದ್ದಾರೆ ಎಂದು ಭವಿಷ್ಯ ನುಡಿದರು.


ಅಂಬೇಡ್ಕರ್, ವಾಲ್ಮೀಕಿ, ಕನಕ ಜಯಂತಿ ಆರಂಭಿಸಿದ್ದು ನಮ್ಮ ಬಿಜೆಪಿ ಸರಕಾರ, ಸಿದ್ದರಾಮಯ್ಯನವರಿಗೆ ಇದ್ಯಾವುದು ಕಾಣಲಿಲ್ಲವೇ..? ಮುಂದಿನ ಚುನಾವಣೆಯಲ್ಲಿ ರಾಜ್ಯದ ಜನರೇ ಕಾಂಗ್ರೆಸ್ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

ಮೇಲುಕೋಟೆ ಕ್ಷೇತ್ರದಲ್ಲಿ ಇಂದೆಂದು ಕಂಡು ಕೇಳರಿಯದ ಬಿಜೆಪಿ ಸಂಘಟನೆಯಾಗಿದೆ. ನಮ್ಮ ನಿರೀಕ್ಷೆಗೂ ಮೀರಿ ಜನಸಂಕಲ್ಪ ಸಭೆಗೆ ಜನರು ಆಗಮಿಸಿದ್ದಾರೆ. ಬಿಜೆಪಿ ಸಂಘಟನೆ ಮಾಡುತ್ತಿರುವ ಡಾ.ಇಂದ್ರೇಶ್ ಅವರಿಗೆ ಮುಂದಿನ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ಬೆಂಬಲಿಸಬೇಕು. ಜಿಲ್ಲೆಯ ಏಳು ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ರಾಜ್ಯದಲ್ಲಿ ಬಿಜೆಪಿ ಕೈಬಲಪಡಿಸಬೇಕು ಎಂದು ಮನವಿ ಮಾಡಿದರು.

ಕಂದಾಯ ಸಚಿವ ಆರ್.ಅಶೋಕ್ ಮಾತನಾಡಿ, ಕಾಂಗ್ರೆಸ್ ಸತೀಶ್ ಜಾರಕಿಹೊಳಿ ಹಿಂದು ಎಂಬ ಪದ ಅವಮಾನ ಎಂದು ಹೇಳಿ ಹಿಂದೂಗಳ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ. ಸಿದ್ದರಾಮಯ್ಯ ಟಿಪ್ಪು ಕಂಡರೆ ಹೋಡಿಹೋಗಿ ಅಪ್ಪಿಕೊಳ್ಳುತ್ತಾರೆ. ಅಲ್ಪ ಸಂಖ್ಯಾತರ ಓಲೈಕೆಗಾಗಿ ಸಿದ್ದರಾಮಯ್ಯ ಹಿಂದೂಗಳನ್ನು ಮತಾಂತರ ಮಾಡಿದ ಟಿಪ್ಪುವನ್ನು ಹುಲಿ ಸಂಬೋದಿಸುತ್ತಾರೆ. ಕಾಂಗ್ರೆಸ್‍ನವರೇ ನೀವು ಟಿಪ್ಪು ಅವನ್ನು ನೆಚ್ಚಿಕೊಂಡರೆ ಕೊನೆಗೆ ಟಿಪ್ಪು ಟ್ರಾಪ್‍ಯೇ ಗತಿ ಎಂದು ಲೇವಡಿ ಮಾಡಿದರು.

ಸಿಎಂ ಬಸವರಾಜ ಬೊಮ್ಮಾಯಿ ಅವರು ಎಸ್ಸಿ/ಎಸ್‍ಟಿಗೆ ಮೀಸಲಾತಿ ನೀಡಿದ್ದಾರೆ. ಅದೇರೀತಿ ಒಕ್ಕಲಿಗರು ಸಹ ಮೀಸಲಾತಿ ಕೇಳುತ್ತಿದ್ದಾರೆ. ಒಕ್ಕಲಿಗರಿಗೂ ನ್ಯಾಯ ದೊರಕಿಸಿಕೊಡುವ ಉದ್ದೇಶದಿಂದ ನಗರ ಒಕ್ಕಲಿಗ ನಿವಾಸಿಗಳಿಗೆ ಚಿಂತಿಸಲಾಗಿದೆ. ಏರ್‍ಪೋರ್ಟ್‍ನಲ್ಲಿ ನಾಡಪ್ರಭು ಕೆಂಪೇಗೌಡ ಪ್ರತಿಮೆಯನ್ನು ನಿರ್ಮಾಣ ಮಾಡಲು ಬಿಜೆಪಿ ಸರಕಾರವೇ ಬರಬೇಕಾಯಿತು. ಮುಂದಿನ ದಿನ ದಿನಗಳಲ್ಲಿ ಕೆಂಪೇಗೌಡರ ಪ್ರತಿಮೆಯನ್ನು ವಿಧಾನಸೌಧದ ಮುಂಭಾಗ ನಿರ್ಮಾಣ ಮಾಡುತ್ತೇವೆ ಎಂದು ಸವಾಲುಹಾಕಿದರು.

ಬಿಜೆಪಿ ಹಿರಿಯ ನಾಯಕರ ಸಹಕಾರದಿಂದ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವನ್ನು ಸಂಘಟನೆ ಮಾಡುವ ಕೆಲಸ ಮಾಡುತ್ತಿದ್ದೇನೆ. ಜಿಲ್ಲೆಯ ಎರಡು ಕಾರ್ಖಾನೆ ಆರಂಭಿಸಿದ್ದ ಬಿಜೆಪಿ ಸರ್ಕಾರ. ಪಾಂಡವಪುರದಲ್ಲಿ ವೀರಶೈವಲಿಂಗಾಯತ ಹಾಗೂ ಕುರುಬ ಸಮುದಾಯದ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಸಹಕಾರ ನೀಡಬೇಕು. ಅಲ್ಲದೆ ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಎಲ್ಲಾ ಸಮುದಾಯದ ಸಮುದಾಯ ನಿರ್ಮಾಣಕ್ಕೆ, ಹಾಗೂ ಎಲ್ಲಾ ಜನಾಂಗ ನಾಯಕರ ಪ್ರತಿಮೆ ನಿರ್ಮಾಣ ಮಾಡಲಾಗುವುದು. ಕ್ಷೇತ್ರದಲ್ಲಿ ನಿಮ್ಮೆಲ್ಲರ ಮನೆ ಮನಗನಾಗಿ ಸೇವೆಸಲ್ಲಿಸಲು ಕ್ಷೇತ್ರದ ಜನತೆ ಸಹಕಾರ ನೀಡಬೇಕೆಂದು ಬಿಜೆಪಿ ಮುಖಂಡ ಡಾ.ಇಂದ್ರೇಶ್ ಮನವಿ ಮಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಉಮೇಶ್ ಮಾತನಾಡಿದರು. ಎಂಎಲ್‍ಸಿ ರವಿಕುಮಾರ್, ಜಗದೀಶ್ ಹಿರೇಮನಿ, ಡಾ.ಎನ್.ಎಸ್. ಇಂದ್ರೇಶ್, ಮುಖಂಡರಾದ ಅಶೋಕ್‍ಜಯರಾಮು, ಸಿದ್ದರಾಮಯ್ಯ, ಮೈಶುಗರ್ ಮಾಜಿ ಅಧ್ಯಕ್ಷ ಜೆ.ಶಿವಲಿಂಗೇಗೌಡ, ಬಿಜೆಪಿ ತಾಲೂಕು ಅಧ್ಯಕ್ಷ ಅಶೋಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಂತರಾಜ್, ಮಹಿಳಾ ಕಾರ್ಯದರ್ಶಿ ಮಂಗಳನವೀನ್‍ಕುಮಾರ್, ಮೇಲುಕೋಟೆ ಮಂಡಲ ಅಧ್ಯಕ್ಷ ಎಸ್‍ಎನ್‍ಟಿ ಸೋಮಶೇಖರ್, ಮುಖಂಡ ನವೀನ್‍ಕುಮಾರ್, ಧನಂಜಯ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Share This Article
Leave a comment