Karnataka

ಬಿಜೆಪಿಯ ಪ್ರಜಾ ಪ್ರಣಾಳಿಕೆ ಬಿಡುಗಡೆ : ಬಿಪಿಎಲ್ ಕುಟುಂಬಕ್ಕೆ ಪ್ರತಿದಿನ ಅರ್ಧಲೀಟರ್ ನಂದಿನಿ ಹಾಲು

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಬಿಜೆಪಿಯ ಪ್ರಜಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ.

ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಜನರ ಹಿತದೃಷ್ಟಿಯಿಂದ ಪ್ರಣಾಳಿಕೆ ತಯಾರಿಸಿದ್ದೇವೆ. ಕೃಷಿಗೆ ಹೆಚ್ಚು ಆದ್ಯತೆ ನೀಡಿದ್ದೇವೆ ಎಂದರು.

  • ಬಿಪಿಎಲ್ ಕುಟುಂಬಕ್ಕೆ ಪ್ರತಿದಿನ ಅರ್ಧಲೀಟರ್ ನಂದಿನಿ ಹಾಲು ಕೊಡುತ್ತೇವೆ. ಬಡವರ ಕಲ್ಯಾಣಕ್ಕೆ ನಾವು ಮಹತ್ವ ನೀಡಿದ್ದೇವೆ ಎಂದರು.
  • ಬಿಪಿಎಲ್ ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್ ಗಳನ್ನು ಉಚಿತವಾಗಿ ವಿತರಿಸುತ್ತೇವೆ.
  • ಕೈಗೆಟುಕುವ ದರದಲ್ಲಿ ಗುಣಮಟ್ಟದ ಮತ್ತು ಆರೋಗ್ಯಕರ ಆಹಾರವನ್ನು ಒದಗಿಸಲು ರಾಜ್ಯದ ಪ್ರತಿ ಮಹಾನಗರ ಪಾಲಿಕೆಯ ವಾರ್ಡ್‍ಗಳಲ್ಲಿ ಅಟಲ್ ಆಹಾರ ಕೇಂದ್ರವನ್ನು ಸ್ಥಾಪಿಸುತ್ತೇವೆ.
  • ಆಯುಷ್ಮಾನ್ ಕಾರ್ಡ್ ಫಲಾನುಭವಿಗಳ ಚಿಕಿತ್ಸಾ ವೆಚ್ಚವನ್ನು 10 ಲಕ್ಷ ರೂ.ಗೆ ಏರಿಕೆ ಮಾಡಲಾಗುವುದು. 5 ಕೆಜಿ ಅಕ್ಕಿ, 5 ಕೆಜಿ ಸಿರಿಧಾನ್ಯ ನೀಡಲಾಗುವುದು ಎಂದು ಹೇಳಿದ್ದಾರೆ.
  • ಉನ್ನತ ಮಟ್ಟದ ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸುತ್ತೇವೆ.
  • ಮಿಷನ್ ಸ್ವಾಸ್ಥ್ಯ ಕರ್ನಾಟಕದ ಅಡಿ ಸರ್ಕಾರಿ ಆಸ್ಪತ್ರೆ, ಆರೋಗ್ಯ ಕೇಂದ್ರಗಳಲ್ಲಿನ ಮೂಲಸೌಕರ್ಯಗಳನ್ನು ಸುಧಾರಿಸುತ್ತೇವೆ. ಮಹಾನಗರ ಪಾಲಿಕೆಯ ಪ್ರತಿ ವಾರ್ಡ್‍ನಲ್ಲಿ ಲ್ಯಾಬೊರೇಟರಿ ಸೌಲಭ್ಯ ಹೊಂದಿರುವ ನಮ್ಮ ಕ್ಲಿನಿಕ್ ಸ್ಥಾಪಿಸುತ್ತೇವೆ. ಹಾಗೂ ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಉಚಿತವಾಗಿ ಸಂಪೂರ್ಣ ಆರೋಗ್ಯ ತಪಾಸಣೆಯ ಸೌಲಭ್ಯ ಕಲ್ಪಿಸುತ್ತೇವೆ.
  • ಬೆಂಗಳೂರಿನ ಅಪಾರ್ಟ್‌ಮೆಂಟ್‌ಗಳಲ್ಲಿ ಸುಲಲಿತ ಜೀವನಕ್ಕೆ ಕರ್ನಾಟಕ ಅಪಾರ್ಟ್ ಮೆಂಟ್ ಮಾಲೀಕತ್ವ ಕಾಯಿದೆ 1972ಕ್ಕೆ ಸೂಕ್ತ ತಿದ್ದುಪಡಿಗಳನ್ನು ತರುತ್ತೇವೆ ಹಾಗೂ ಕಂದುಕೊರತೆಗಳ ಪರಿಹಾರಕ್ಕೆ ಆನ್ ಲೈನ್ ವ್ಯವಸ್ಥೆಯನ್ನು ಅನುಷ್ಠಾನಗೊಳಿಸುತ್ತೇವೆ.
  • ವಿಶ್ವೇಶ್ವರಯ್ಯ ವಿದ್ಯಾ ಯೋಜನೆ ಇದರಡಿ ಸರ್ಕಾರಿ ಶಾಲೆಗಳನ್ನು ಅತ್ಯುನ್ನತ ಶ್ರೇಣಿಗೆ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪ್ರಬುದ್ಧರು ಹಾಗೂ ಸಂಸ್ಥೆಗಳ ಜತೆ ಸಹಭಾಗಿತ್ವ ಹೊಂದಲಾಗುತ್ತದೆ.
  • ಸಮನ್ವಯ ಯೋಜನೆ ಇದರಡಿ ತ್ವರಿತಗತಿಯಲ್ಲಿ SME ಗಳು ಮತ್ತು ITI ಗಳ ನಡುವೆ ಸಮನ್ವಯತೆ ಸಾಧಿಸುತ್ತೇವೆ. ಪ್ರತಿಭಾವಂತ ಯುವ ವೃತ್ತಿಪರರಿಗೆ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಕ್ರಿಯಾತ್ಮಕ ಪರಿಸರ ವ್ಯವಸ್ಥೆಯನ್ನು ನಿರ್ಮಾಣ ಮಾಡುತ್ತೇವೆ.
  • ಐಎಎಸ್, ಕೆಎಎಸ್, ಬ್ಯಾಂಕಿಂಗ್, ಸರ್ಕಾರಿ ಉದ್ಯೋಗಾಕಾಂಕ್ಷಿಗಳು ತರಬೇತಿ ಪಡೆಯಲು ಆರ್ಥಿಕ ಪ್ರೋತ್ಸಾಹವನ್ನು ನೀಡುವ ಮೂಲಕ ಮಹತ್ವಾಕಾಂಕ್ಷೆಯ ಯುವಜನರಿಗೆ ವೃತ್ತಿ ಬೆಂಬಲವನ್ನು ಒದಗಿಸುತ್ತೇವೆ.
  • ನಮ್ಮ ಮುಂದಿನ ಪೀಳಿಗೆಗಾಗಿ ಬೆಂಗಳೂರನ್ನು ಅಭಿವೃದ್ಧಿಪಡಿಸಿ, ಅದನ್ನು ರಾಜ್ಯ ರಾಜಧಾನಿ ಪ್ರದೇಶ ಎಂದು ಗುರುತಿಸಲಾಗುತ್ತದೆ. ತಂತ್ರಜ್ಞಾನ ಆಧಾರಿತ ನಗರ ಅಭಿವೃದ್ಧಿ ಕಾರ್ಯಕ್ರಮವನ್ನು ಕಾರ್ಯಗತಗೊಳಿಸುತ್ತೇವೆ. ಸುಲಲಿತ ಜೀವನಕ್ಕೆ ಅನುವುಮಾಡಿಕೊಡುವ ಸುಸಂಘಟಿತ ಸಾರಿಗೆ ಜಾಲ ಸೃಷ್ಟಿಸುತ್ತೇವೆ. ಅಲ್ಲದೇ, ಬೆಂಗಳೂರನ್ನು ಡಿಜಿಟಲ್ ಇನ್ನೋವೇಶನ್‍ನ ಜಾಗತಿಕ ಕೇಂದ್ರವಾಗಿ ರೂಪಿಸಲು ಪೂರಕ ಪರಿಸರ ವ್ಯವಸ್ಥೆ ಕಲ್ಪಿಸುತ್ತೇವೆ.
  • ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಿರು ಶೀತಲೀಕರಣ ಸೌಲಭ್ಯಗಳು ಮತ್ತು ಕೃಷಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು 30,000 ಕೋಟಿ ಮೊತ್ತದ ಕೆ-ಅಗ್ರಿ ಫಂಡ್ ಸ್ಥಾಪಿಸುತ್ತೇವೆ. ಎಪಿಎಂಸಿಗಳ ಆಧುನೀಕರಣ ಮತ್ತು ಡಿಜಿಟಲೀಕರಣ ಮಾಡುತ್ತೇವೆ. ಕೃಷಿ ಯಾಂತ್ರೀಕರಣಕ್ಕೆ ಒತ್ತು ನೀಡುತ್ತೇವೆ. ಜತೆಗೆ, 5 ಹೊಸ ಕೃಷಿ ಆಧಾರಿತ ಕೈಗಾರಿಕಾ ಕ್ಲಸ್ಟರ್ ಗಳನ್ನು ಮತ್ತು 3 ಹೊಸ ಆಹಾರ ಸಂಸ್ಕರಣಾ ಪಾರ್ಕ್‍ಗಳನ್ನು ಸ್ಥಾಪಿಸುತ್ತೇವೆ.

ಬಿಜೆಪಿಯ ಪ್ರಜಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಮಾಜಿ ಸಿಎಂ ಡಿವಿ ಸದಾನಂದಗೌಡ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಸೇರಿ ಹಲವು ನಾಯಕರು ಇದ್ದರು.

Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024