ಮಾಜಿ ಸಿಎಂ ಕುಮಾರಸ್ವಾಮಿ ಕೆಪಿಎಸ್‌ಸಿಯನ್ನು ದುರ್ಬಳಕೆ ಮಾಡಿ ಕಮ೯ಕಾಂಡದ ರುವಾರಿಯೂ ಆಗಿದ್ದಾರೆ.
ಬೇಕಾದವರಿಗೆ ಉದ್ಯೋಗ ನೀಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಆರ್‌ಎಸ್‌ಎಸ್ ಮೂಲದ ವ್ಯಕ್ತಿಗಳನ್ನೇ ಸರ್ಕಾರ ಅಧಿಕಾರಿಗಳನ್ನಾಗಿ ಮಾಡುತ್ತಿದೆ ಎಂಬ ಕುಮಾರಸ್ವಾಮಿ ಆರೋಪಗಳಿಗೆ ಬಿಜೆಪಿ ಇಂದು ಸರಣಿ ಟ್ವೀಟ್ ಮಾಡಿ ತಿರುಗೇಟು ನೀಡಿದೆ.
ಘಾತುಕತನವನು ಬಿಡದೆ ನಿರಂತರ ಗೀತೆಯನೋದಿದೊಡೇನು ಫಲ?
— BJP Karnataka (@BJP4Karnataka) October 18, 2021
ಪುರಂದರ ದಾಸರ ಈ ಪದ್ಯದ ಸಾಲು @hd_kumaraswamy ಅವರಿಗೆ ಅಕ್ಷರಶಃ ಅನ್ವಯವಾಗುತ್ತದೆ.
ನಿಮ್ಮ ತಪ್ಪು, ವೈರುಧ್ಯ, ಸಮಯಸಾಧಕತನವನ್ನು ಅನ್ಯರ ನಿಂದನೆಯ ಮೂಲಕ ಮುಚ್ಚಿಕೊಳ್ಳಲು ಸಾಧ್ಯವೇ?
ಕಾಗೆ ಗಂಗಾ ಸ್ನಾನ ಮಾಡಿದರೆ ಬಿಳುಪಾಗುವುದೇ, ಕುಮಾರಸ್ವಾಮಿ?
ಘಾತುಕತನವನು ಬಿಡದೆ ನಿರಂತರ ಗೀತೆಯನೋದಿದೊಡೇನು ಫಲ? ಪುರಂದರ ದಾಸರ ಈ ಪದ್ಯದ ಸಾಲು ಕುಮಾರಸ್ವಾಮಿ ಅವರಿಗೆ ಅಕ್ಷರಶಃ ಅನ್ವಯವಾಗುತ್ತದೆ.
ನಿಮ್ಮ ತಪ್ಪು, ವೈರುಧ್ಯ, ಸಮಯಸಾಧಕತನವನ್ನು ಅನ್ಯರ ನಿಂದನೆಯ ಮೂಲಕ ಮುಚ್ಚಿಕೊಳ್ಳಲು ಸಾಧ್ಯವೇ? ಕಾಗೆ ಗಂಗಾ ಸ್ನಾನ ಮಾಡಿದರೆ ಬಿಳುಪಾಗುವುದೇ ಕುಮಾರಸ್ವಾಮಿ? ಎಂದು ಬಿಜೆಪಿ ಪ್ರಶ್ನೆ ಮಾಡಿದೆ
ಕುಮಾರಸ್ವಾಮಿ ಅವರೇ, ʼವೃದ್ಧನಾರಿ ಪತಿವ್ರತಾʼ ಎಂಬ ಮಾತು ಗೊತ್ತೇ? ನಿಮ್ಮ ಸ್ಥಿತಿಯೂ ಹಾಗಾಗಿದೆ. ಅವಕಾಶ ಸಿಕ್ಕಾಗಲೆಲ್ಲ ಗುಟ್ಟಿನಲ್ಲಿ ತಪ್ಪು ಮಾಡುವುದು ಬಳಿಕ ಗರತಿಯ ಸೋಗು ಹಾಕುವುದು ನಿಮ್ಮ ಹಳೇ ಚಾಳಿ. ಕೆಪಿಎಸ್‌ಸಿ ಕರ್ಮಕಾಂಡದ ರೂವಾರಿಯಾಗಿರುವ ನೀವು ಈಗ ಊರಿಗೆ ಉಪದೇಶ ಕೊಡುವಂತಾಗಿರುವುದೇ ಕಾಲದ ಚೋದ್ಯ ಎಂದು ಟೀಕಿಸಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು