ನಿನ್ನೆ ದೆಹಲಿಯ ಕೆಂಪುಕೋಟೆಯ ಮೇಲೆ ಸಿಖ್ ಧರ್ಮ ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.
ಈ ಪ್ರಕರಣದ ನೇತೃತ್ವ ವಹಿಸಿದ್ದವನು ಪಂಜಾಬ್ ಚಿತ್ರನಟ ದೀಪ್ ಸಿಧು ಎಂಬಾತ ಎಂದು ತಿಳಿದು ಬಂದಿದೆ.
ಈತ ಬಿಜೆಪಿ ಸಂಸದ ಸನ್ನಿ ಡಿಯೋಲ್ ಬೆಂಬಲಿಗ ಸಹ ಆಗಿದ್ದಾರೆ.
ದೀಪ್ ಸಿಧು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಮತಯಾಚನೆ ಮಾಡಿದ್ದರು.
ಗುರುದಾಸ್‍ಪುರದ ಬಿಜೆಪಿ ಸಂಸದ ಸನ್ನಿ ಡಿಯೋಲ್ ಪರ ಪ್ರಚಾರ ಮಾಡಿದ್ದರು. ಸದ್ಯ ಈ ವಿಷಯ ತಿಳಿಯುತ್ತಿದ್ದಂತೆ ದೀಪ್ ಸಿಧು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಜತೆ ಇರುವ ಫೋಟೋಗಳು ವೈರಲ್ ಆಗಿವೆ.
ಸಿಂಘು ಗಡಿಯಲ್ಲಿ ರೈತರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಸಂಯುಕ್ತ ಕಿಸಾನ್ ಮೋರ್ಚಾ, ದೀಪ್ ನಡವಳಿಕೆ ಗಮನಿಸಿದ್ದರು. ಹೀಗಾಗಿ ದೀಪ್‌ನನ್ನು ಧರಣಿಯಿಂದ ಹೊರಗಿಟ್ಟಿದ್ದರು. ಇನ್ನು ಓರ್ವ ರೈತ ನಾಯಕರು ದೀಪ್‌ನನ್ನು ರೈತ ಹೋರಾಟದ ಶತ್ರು ಎಂದು ಕರೆದಿದ್ದಾರೆ.
ಸದ್ಯ ಈಗ ರೈತ ಸಂಘಟನೆಗಳು ಈತನ ವಿರುದ್ಧ ತನಿಖೆಗೆ ಆಗ್ರಹಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ