ಕೇರಳ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಬಂದಿರುವ ಟಿಕೆಟ್‍ನ್ನು ಯುವಕ ನಿರಾಕರಿಸಿ, ಬಿಜೆಪಿ ನಾಯಕರಿಗೆ ಶಾಕ್ ನೀಡಿದ್ದಾನೆ.
ಮಣಿಕುಟ್ಟನ್‍ಪಣಿಯಣ್ (31) ಎಂಬಿಎ ಪದವೀಧರನಿಗೆ ಬಿಜೆಪಿ ಕಡೆಯಿಂದ ಟಿಕೆಟ್ ನೀಡಿದರೂ ಸಹ ಯುವಕ ನಿರಾಕರಿಸಿದ್ದಾನೆ.
ಯುವಕ ನಾನು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾನೆ.
ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ್ದ ಸಮುದಾಯಕ್ಕೆ ಮೀಸಲಾಗಿದ್ದ ಮನಂತವಾಡಿ ಕ್ಷೇತ್ರದಿಂದ ಮಣಿಕುಟ್ಟನ್‍ಗೆ ಟಿಕೆಟ್ ಘೋಷಣೆ ಮಾಡಲಾಗಿತ್ತು.
ಮಣಿಕುಟ್ಟನ್ ಕೇರಳದ ಪಣಿಯಾ ಬುಡಕಟ್ಟು ಸಮುದಾಯದಲ್ಲಿ ಎಂಬಿಎ ಪದವಿಗಳಿಸಿದ ಮೊದಲ ವ್ಯಕ್ತಿ ಎಂದು ಬಿಜೆಪಿ ಹೇಳಿತ್ತು. ಆದರೆ ಅಭ್ಯರ್ಥಿ ಪಟ್ಟಿಯಲ್ಲಿರುವ ಮಣಿಕುಟ್ಟನ್ ಟಿಕೆಟ್ ನಿರಾಕರಿಸಿದ್ದಾನೆ.
ಕೇಂದ್ರದ ನಾಯಕರು ನನ್ನನ್ನು ಬಿಜೆಪಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ. ಆದರೆ ನಾನು ಒಂದು ಉದ್ಯೋಗ ಪಡೆದು, ನನ್ನ ಕುಟುಂಬದೊಂದಿಗೆ ಇರಲು ಬಯಸುತ್ತೇನೆ. ಬಿಜೆಪಿ ನನಗೆ ನೀಡಿರುವ ಅವಕಾಶವನ್ನು ನಾನು ಸಂತೋಷದಿಂದ ನಿರಾಕರಿಸುತ್ತೇನೆ ಎಂದು ಮಣಿಕುಟ್ಟನ್ ಹೇಳಿದ್ದಾನೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ