ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚಿಸುತ್ತೇವೆ : ಅಮಿತ್ ಶಾ ವಿಶ್ವಾಸ

Team Newsnap
1 Min Read

ಸಕಲೇಶಪುರ: ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚಿಸುತ್ತೇವೆ. ಬಿಜೆಪಿ ಎಲ್ಲ ವರ್ಗಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು.

ಸಕಲೇಶಪುರದಲ್ಲಿ ಸೋಮವಾರ ಅಬ್ಬರದ ಪ್ರಚಾರ ನಡೆಸಿದರು. ತೆರೆದ ವಾಹನದಲ್ಲಿ ಜನರ ಹರ್ಷೋದ್ಘಾರದ ಮಧ್ಯೆ ರೋಡ್ ಶೋ ನಡೆಸಿದ ಅಮಿತ್ ಶಾ ನಂತರ ಮಾತನಾಡಿ, ಕಾಂಗ್ರೆಸ್ ಜಾತಿವಾದಿ ಸ್ವಭಾವವನ್ನು ಹೊಂದಿದೆ ಎಂದು ಟೀಕಿಸಿದರು.

ಇದನ್ನು ಓದಿ –ಮುಖ್ಯಮಂತ್ರಿ ಯಾರಾಗಬೇಕು ಎಂದು ಹೈಕಮಾಂಡ್ ನಿರ್ಧಾರ – ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ರಾಹುಲ್ ಗಾಂಧಿ ಅವರು ಬಿಜೆಪಿ ಸರ್ಕಾರದ ವಿರುದ್ಧ ಶೇ 40 ಕಮೀಷನ್ ಆರೋಪ ಮಾಡಿದ್ದಾರೆ. ಖಚಿತವಾದ ಸಾಕ್ಷ್ಯ ಹೊಂದಿದ್ದರೆ ನ್ಯಾಯಾಲಯಕ್ಕೆ ಹೋಗಲಿ ಎಂದು ತಿರುಗೇಟು ನೀಡಿದರು.

Share This Article
Leave a comment