November 27, 2022

Newsnap Kannada

The World at your finger tips!

praveen nettar

BJP ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಪ್ರಕರಣ – ರಾಜ್ಯದ 35 ಕಡೆ NIA ದಾಳಿ

Spread the love

ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ರಾಜ್ಯದ 35ಕ್ಕೂ ಹೆಚ್ಚು ಕಡೆ ಮಂಗಳವಾರ ಬೆಳಗ್ಗೆ ದಾಳಿ ಮಾಡಿದ್ದಾರೆ.

ಬೆಳ್ಳಾರೆ, ಸುಳ್ಯ, ಪುತ್ತೂರು, ಮಂಗಳೂರು, ಮಡಿಕೇರಿ ಸೇರಿದಂತೆ ಹಲವೆಡೆ ದಾಳಿ ಮಾಡಿ ತೀವ್ರ ಶೋಧಕಾರ್ಯ ನಡೆಸುತ್ತಿದ್ದಾರೆ.

ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ತನಿಖೆಯನ್ನು ಎನ್​ಐಎ ಅಧಿಕಾರಿಗಳು ನಡೆಸುತ್ತಿದ್ದಾರೆ.

ಪ್ರವೀಣ್ ಹತ್ಯೆಯಲ್ಲಿ ಕೆಲವು ಸಂಘಟನೆಗಳ ಕೈವಾಡದ ಮಾಹಿತಿ ಎಂಬ ಮಾಹಿತಿ ಸಿಕ್ಕಿದೆ. ಸ್ಥಳೀಯ ಮಟ್ಟದಲ್ಲಿ ಸಂಘಟನೆಗಳ ಕಾರ್ಯ ಚಟುವಟಿಕೆಗಳು ಚುರುಕುಗೊಂಡಿವೆ.

ಬೆಂಗಳೂರಲ್ಲಿ ಬೆಸ್ಕಾಂ ನಿರ್ಲಕ್ಷ್ಯಕ್ಕೆ ಬಲಿ: ಭಾರಿ ಮಳೆಗೆ ಯುವತಿ ಸಾವು

ಈ ಕಾರಣಗಳಿಂದ ಎನ್ಐಎ ತಂಡ ದಾಳಿ ಮಾಡಿದೆ. ಬೆಳಗ್ಗೆ 6 ಗಂಟೆಯಿಂದ ದಾಳಿ ಮಾಡಿ, ತನಿಖೆಯನ್ನು ಚುರುಕುಗೊಳಿಸಿದೆ.

error: Content is protected !!