ಬಿಜೆಪಿಯವರಂತಹ ಕೊಳಕರು, ಜಾತಿವಾದಿಗಳು ಇನ್ಯಾರೂ ಇಲ್ಲ ಎಂದು ಮಾಜಿ ಸಿಎಂ
ಸಿದ್ದರಾಮಯ್ಯ ಮಂಡ್ಯದಲ್ಲಿ ಹೇಳಿದರು.
ಮೈಸೂರಿಗೆ ಹೋಗುವ ಮುನ್ನ ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕತ೯ರ ಅದ್ದೂರಿ ಸ್ವಾಗತ ಸ್ವೀಕರಿಸಿ ಸುದ್ದಿಗಾರರ ಜೊತೆ ಮಾತನಾಡಿ, ಹಾನಗಲ್ ನಲ್ಲಿ ದಲಿತ ಎಡಗೈನವರ ಕಾರ್ಯಕ್ರಮದಲ್ಲಿ ನಾನು ಸಂವಿಧಾನ ಬದಲಾವಣೆ ಮಾಡ್ತೀನಿ ಅಂದವರ ಪಕ್ಷಕ್ಕೆ ಹಲವರು ಹೋಗ್ತಿದ್ದಾರೆ ಎಂದೆ,
ಆದರೆ ಈ ಬಿಜೆಪಿಯವರು ನನ್ನ ಹೇಳಿಕೆ ತಿರುಚಿ ಅಪಪ್ರಚಾರ ಮಾಡ್ತಿದ್ದಾರೆ ಎಂದರು
ಸಿದ್ದರಾಮಯ್ಯ ಜಾತಿ ಮಾಡ್ತಿದ್ದಾರೆ ಅಂತಾರೆ. ಇತಿಹಾದ ಪುರುಷರ ಜಯಂತಿ ಆಚರಣೆ ಜಾರಿಗೆ ತಂದಿದ್ದೆ ನಾನು .ಇವರೇ ಗಿರಾಕಿಗಳು ಕೊಳಕರು ಅವರೇ ಜಾತಿ ಮಾಡೋದು.
ಜಾತಿ ಕೊಳಕರೆ ಜಾತಿ ಮಾಡೋದು.
ಆದ್ರೆ ನನ್ನ ಜಾತಿ ಮಾಡ್ತಾರೆ ಅನ್ನುತ್ತಾರೆ ಎಂದು ಟೀಕಿಸಿದರು
ನಾನು ಸಿ ಎಂ ಆದ್ನಲ್ಲ ಅನ್ನೋ ಹೊಟ್ಟೆ ಉರಿಯಿಂದ ಹಾಗೆ ಹೇಳ್ತಾರೆ.ಬಿಜೆಪಿಯವರಂತ ಕೊಳಕರು, ಜಾತಿವಾದಿಗಳು ಇನ್ಯಾರೂ ಇಲ್ಲ ಇದನ್ನೇ ಕೆಟ್ಟದ್ದಾಗಿ ಹೇಳಿಕೊಂಡು ನನ್ನ ವಿರುದ್ಧ ಹೋರಾಟ ಮಾಡಿದ್ದಾರೆ.
ಹೀಗಾಗಿ ನೀವು ಅವರ ಬಗ್ಗೆ ಹುಷಾರಾಗಿರಿ ಎಂದು ಎಚ್ಚರಿಕೆ ನೀಡಿದರು
ನನ್ನ ಫ್ಲೆಕ್ಸ್ ಸುಟ್ಟಿದ ತಕ್ಷಣ ನಾನು ಸುಟ್ಟೋಗಲ್ಲ ನನ್ನ ಜನ, ನನ್ನ ಪ್ರೀತಿಸುವವರು ಸುಟ್ಟೋಗಲ್ಲ.
ಎಲ್ಲರೂ ಸಮಾನವಾಗಿರಬೇಕು.
ಜಾತಿ ವ್ಯವಸ್ಥೆ ಸಮಾಜದಿಂದ ದೂರವಾಗಬೇಕು.ಮನುಷ್ಯರಾಗಿ, ಸಮಾನರಾಗಿ ಬದುಕುವಂತಾಗಬೇಕು.ಬಹಳ ಜನ ಬುದ್ಧಿ ಹೀನರು ಟೀಕೆ ಮಾಡ್ತಾರೆ. ಎಂದರು
ಸಿದ್ದರಾಮಯ್ಯ ಈ ಸಮಾಜಕ್ಕೆ ಏನು ಕೊಟ್ಟ ಅಂತಾರೆ.
ಒಂದು ಜಾತಿಯಲ್ಲಿ ಮಾತ್ರ ಬಡವ, ಶ್ರೀಮಂತ ಇಲ್ಲ.ಎಲ್ಲಾ ಜಾತಿಯಲ್ಲೂ ಬಡವರಿದ್ದಾರೆ. ಹೀಗಾಗಿ ಎಲ್ಲಾ ಜಾತಿಯ ಬಡವರ ಅಭಿವೃದ್ಧಿ ಆಗಬೇಕು. ನಾನು ಕೊಟ್ಟ ಯೋಜನೆಗಳು ಒಂದು ಜಾತಿಗೆ ಸೀಮಿತವಾಗಿಲ್ಲ.
ಅವಕಾಶದಿಂದ ವಂಚಿತರಾದವರ ಪರ ನಾನು ಕೆಲಸ ಮಾಡಿದ್ದೇನೆ.
ಆದರೂ ಸಿದ್ದರಾಮಯ್ಯ ಜಾತಿ ಮಾಡ್ತಾನೆ ಅಂತಾರೆ ನೊಂದು ಹೇಳಿದರು,
ಎಲ್ಲಾ ಜಾತಿಗಳ ನಾಯಕರ
ಕೆಂಪೇಗೌಡ, ಕಿತ್ತೂರು ರಾಣಿ ಚೆನ್ನಮ್ಮ, ಟಿಪ್ಪು, ಭಗೀರತ, ಕೃಷ್ಣ, ಜೈನ ಜಯಂತಿ ಮಾಡಿದ್ದು ನಾನು.
ಆದರೂ ಸಿದ್ದರಾಮಯ್ಯನವರನ್ನು ಜಾತಿ ಜಾತಿ ಅಂತಾರೆ.
ಕೆಲವು ಜಾತಿ ಮಾಡುವ ಕೊಳಕು ಮನಸ್ಸಿನವರು ನನ್ನ ವಿರುದ್ಧ ಆರೋಪ ಮಾಡ್ತಾರೆ.
ಅರಸು ನಂತರ 5 ವರ್ಷ ಪೂರ್ಣಾವಧಿ ಆಡಳಿತ ಮಾಡಿದ್ದು ನಾನು.
ಹೀಗಾಗಿ ಅವರಿಗೆ ಹೊಟ್ಟೆ ಕಿಚ್ಚು.
ಹೊಟ್ಟೆ ಕಿಚ್ಚಿಗಾಗಿ ಈ ರೀತಿ ಆರೋಪ ಮಾಡ್ತಾರೆ.
ಕುರುಬರ ಸಂಘದ ಕಾರ್ಯಕ್ರಮದಲ್ಲಿ ಇತರೆ ಜಾತಿಯವರು ನನ್ನ ಜೊತೆ ಇದ್ದಾರೆ.
ಒಕ್ಕಲಿಗರು ಬಹಳಷ್ಟು ಜನ ನನ್ನ ಜೊತೆ ಬಂದಿದ್ದಾರೆ.
ಆದರೂ ಕೆಲವರು ನನ್ನ ಒಕ್ಕಲಿಗರ ವಿರೋಧಿ ಅಂತಾರೆ ಯಾಕೆ ಎಂದು ಪ್ರಶ್ನೆ ಮಾಡಿದರು.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
ಮಂಡ್ಯ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ