ಮಳೆಯಿಂದ ಹಾನಿಗೊಳಗಾಗಿರುವ ವಿವಿಧ ಪ್ರದೇಶಗಳಿಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಎರಡು ದಿನಗಳ ಕಾಲ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈ ಹಿನ್ನಲೆ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಕೊಡಗು ಜಿಲ್ಲೆಗೆ ಭೇಟಿ ನೀಡಿದ ವೇಳೆ ಅವರಿಗೆ ಕಪ್ಪು ಪಟ್ಟಿ ಪ್ರದರ್ಶನ ಮಾಡಿರುವ ಘಟನೆ ನಡೆದಿದೆ.
ಇತ್ತ ಕಾಂಗ್ರೆಸ್ ಕಾರ್ಯಕರ್ತರು ಸಿದ್ದರಾಮಯ್ಯ ಅವರಿಗೆ ಅದ್ದೂರಿ ಸ್ವಾಗತ ಕೋರಿದ್ದಾರೆ. ಪೊನ್ನಂಪೇಟೆ ತಾಲೂಕಿನ ಆನೆ ಚೌಕೂರು ಗೇಟ್ ಬಳಿ ಕೊಡಗು ಜಿಲ್ಲೆಗೆ ಪ್ರವೇಶ ಪಡೆಯುತ್ತಿದ್ದಂತೆ ಹೂಮಾಲೆ ಹಾಕಿ ಕಾರ್ಯಕರ್ತರು ಸ್ವಾಗತಿಸಿದರು.
ಇತ್ತ ಕೊಡಗಿಗೆ ಆಗಮಿಸುತ್ತಿದಂತೆ ತಿತಿಮತಿ ಬಳಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನ ಮಾಡಿ ಘೇರಾವ್ ಹಾಕಿದರು.
ಬೆಂಗಳೂರು ಕಾಲೇಜು ವಿದ್ಯಾರ್ಥಿ ಕೊಲೆ – ಹತ್ಯೆಗೆ ಪೆನ್ ಚಾಕು ಬಳಕೆ : ಆರು ಆರೋಪಿಗಳ ಬಂಧನ
ಸಾಮಾಜಿಕ ಜಾಲತಾಣಗಳಲ್ಲಿ ಸಿದ್ದರಾಮಯ್ಯ ಆಗಮನಕ್ಕೆ ವಿರೋಧ ವ್ಯಕ್ತಪಡಿಸಿದ್ದ ಬಿಜೆಪಿ ಕಾರ್ಯಕರ್ತರು, ‘ಗೋ ಬ್ಯಾಕ್ ಸಿದ್ದು ಖಾನ್’ ಅಂತ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು