Main News

ಪತ್ರಕರ್ತರ ಸೋಗಿನಲ್ಲಿ ವೈದ್ಯನಿಗೆ ಬ್ಲಾಕ್‌ಮೇಲ್: ಮೂವರು ಯುವತಿಯರ ಬಂಧನ

ಪತ್ರಕರ್ತರು ಎಂದು ಹೇಳಿಕೊಂಡು ವೈದ್ಯರೊಬ್ಬರನ್ನು ಬ್ಲಾಕ್‌ಮೇಲ್ ಮಾಡಿ ಹಣ ಕೊಡುವಂತೆ ಒತ್ತಾಯಿಸಿರುವ ಮೂವರು ಯುವತಿ ರನ್ನು ಮೈಸೂರಿನ ಮಂಡಿ ಪೊಲೀಸರು ಬಂಧಿಸಿದ್ದಾರೆ‌ .

ಅಮ್ರಿನ್ ಸಾನಿಯಾ, ಸಾಹಿದ್ ಆಶಿಯಾ ಬಾಯಿ ಎಂಬವರು ಪತ್ರಕರ್ತರು ಎಂದು ಹೇಳಿಕೊಂಡು ಬ್ಲಾಕ್‌ಮೇಲ್ ಮಾಡಿದವರು ಎಂದು ಹೇಳಲಾಗಿದೆ.

ಕೆ.ಆರ್.ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ.ರಾಜೇಶ್ ಎಂಬವರನ್ನು ನೀವು ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ. ಹಣ ಪಡೆಯುತ್ತಿದ್ದೀರಾ. ಈ ಬಗ್ಗೆ ನಮ್ಮ ಬಳಿ ದೂರು ಪತ್ರಗಳು ಮತ್ತು ಸಂಬಂಧಿಸಿದ ವಿಡಿಯೋ ಕ್ಲಿಪ್‌ಗಳು ಇದೆ, ಮಾಧ್ಯಮಗಳಲ್ಲಿ ಪ್ರಸಾರ ಮಾಡುತ್ತೇವೆ. ನಿಮ್ಮ ಹೆಸರು ಹಾಳಾಗುತ್ತದೆ ಎಂದು ಬ್ಲಾಕ್‌ಮೇಲ್ ಮಾಡಿದ್ದಾರೆ.

ಇವೆಲ್ಲವನ್ನೂ ತಡೆಯಬೇಕಾದರೆ 5 ಲಕ್ಷ ರು ನೀಡುವಂತೆ ಬೇಡಿಕೆ ಇಟ್ಟಿದ್ದಲ್ಲದೆ, ಆನಂತರ 2 ಲಕ್ಷ ರೂ. ನೀಡುವಂತೆ ಕೇಳಿದ್ದಾರೆ. ಅಂತಿಮವಾಗಿ 50 ಸಾವಿರ ರೂ. ಅನ್ನು ನೀಡಲು ಒಪ್ಪಿದ್ದಾರೆ.

ಜ.18ರಂದು ವೈದ್ಯರು ಹಣ ನೀಡಲು ಸಂಜೀವಿನಿ ಆಸ್ಪತ್ರೆ ಬಳಿ ಬಂದಾಗ ಅವರ ಮೇಲೆ ಹತ್ತು ಜನರ ಗುಂಪೊಂದು ದಾಳಿ ಮಾಡಲು ಯತ್ನಿಸಿದೆ. ಈ ವೇಳೆ ವೈದ್ಯರು ಅವರಿಂದ ತಪ್ಪಿಸಿಕೊಂಡು ಹೋಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More

September 19, 2024

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು

ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಾಗಿದೆ. ಶಾಸಕ… Read More

September 19, 2024

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More

September 18, 2024

ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More

September 17, 2024